ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಾಮಪತ್ರ ಸಲ್ಲಿಕೆ ವೇಳೆ ರೋಡ್ ಶೋದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಧಾರವಾಡ ಕ್ಷೇತ್ರದಲ್ಲಿ ಸತತ 5ನೇ ಬಾರಿ ಕಣಕ್ಕಿಳಿದ ಪ್ರಹ್ಲಾದ್ ಜೋಶಿ ಅವರು 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಶತಸಿದ್ಧ. ಇದರಲ್ಲಿ ಅನುಮಾನವೇ ಇಲ್ಲವೆಂದು ಬಿಎಸ್‌ವೈ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಅಭ್ಯರ್ಥಿಯಾಗಿ 5ನೇ ಬಾರಿ ಸ್ಪರ್ಧಿಸಿರುವ ಜೋಶಿ ಅವರು ಕಳೆದ ನಾಲ್ಕು ಅವಧಿಗಳಲ್ಲಿಯೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅತ್ಯಂತ ಪರಿಶ್ರಮಿ ನಾಯಕ ಎಂದು ಬಿಎಸ್‌ವೈ ಬಣ್ಣಿಸಿದರು.
ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ಕ್ಷೇತ್ರದಾದ್ಯಂತ ಅದ್ಭುತ ಅಭಿವೃದ್ಧಿ ಕಾರ್ಯಗಳನ್ನು ಪ್ರಹ್ಲಾದ ಜೋಶಿ ಮಾಡಿದ್ದಾರೆ. ರೈಲ್ವೆ ಮಾರ್ಗ, ನಿಲ್ದಾಣ ಹೀಗೆ ಅನೇಕ ಮಾದರಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.
ಈಗ 5ನೇ ಬಾರಿಯೂ ಕ್ಷೇತ್ರದ ಅಭಿವೃದ್ಧಿಗಾಗಿ ಜನ ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಲೀಡ್ ಕೊಟ್ಟು ಜೋಶಿ ಅವರನ್ನು ಗೆಲ್ಲಿಸಿಕೊಳ್ಳುತ್ತಾರೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…