Featured

ಪ್ರಹ್ಲಾದ್‌ ಜೋಶಿ  2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ : ಯಡಿಯೂರಪ್ಪ ಭವಿಷ್ಯ – Vishwanews24

ಪ್ರಹ್ಲಾದ್‌ ಜೋಶಿ  2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ : ಯಡಿಯೂರಪ್ಪ ಭವಿಷ್ಯ

ಹುಬ್ಬಳ್ಳಿ: ಧಾರವಾಡ ಲೋಕಸಭಾ  ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್‌ ಜೋಶಿ  2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ  ಭವಿಷ್ಯ ನುಡಿದಿದ್ದಾರೆ.

ಹುಬ್ಬಳ್ಳಿ-ಧಾರವಾಡದಲ್ಲಿ ಇಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನಾಮಪತ್ರ ಸಲ್ಲಿಕೆ ವೇಳೆ ರೋಡ್ ಶೋದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಧಾರವಾಡ ಕ್ಷೇತ್ರದಲ್ಲಿ ಸತತ 5ನೇ ಬಾರಿ ಕಣಕ್ಕಿಳಿದ ಪ್ರಹ್ಲಾದ್‌ ಜೋಶಿ ಅವರು 2 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ಶತಸಿದ್ಧ. ಇದರಲ್ಲಿ ಅನುಮಾನವೇ ಇಲ್ಲವೆಂದು ಬಿಎಸ್‌ವೈ ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿಯಾಗಿ 5ನೇ ಬಾರಿ ಸ್ಪರ್ಧಿಸಿರುವ ಜೋಶಿ ಅವರು ಕಳೆದ ನಾಲ್ಕು ಅವಧಿಗಳಲ್ಲಿಯೂ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅತ್ಯಂತ ಪರಿಶ್ರಮಿ ನಾಯಕ ಎಂದು ಬಿಎಸ್‌ವೈ ಬಣ್ಣಿಸಿದರು.

ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸೇರಿದಂತೆ ಕ್ಷೇತ್ರದಾದ್ಯಂತ ಅದ್ಭುತ ಅಭಿವೃದ್ಧಿ ಕಾರ್ಯಗಳನ್ನು ಪ್ರಹ್ಲಾದ ಜೋಶಿ ಮಾಡಿದ್ದಾರೆ. ರೈಲ್ವೆ ಮಾರ್ಗ, ನಿಲ್ದಾಣ ಹೀಗೆ ಅನೇಕ ಮಾದರಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಈಗ 5ನೇ ಬಾರಿಯೂ ಕ್ಷೇತ್ರದ ಅಭಿವೃದ್ಧಿಗಾಗಿ ಜನ ಹಿಂದಿನ ಚುನಾವಣೆಗಳಿಗಿಂತ ಹೆಚ್ಚು ಲೀಡ್ ಕೊಟ್ಟು ಜೋಶಿ ಅವರನ್ನು ಗೆಲ್ಲಿಸಿಕೊಳ್ಳುತ್ತಾರೆ ಎಂದು ಬಿಎಸ್ ವೈ ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

20 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago