Featured

ಪ್ರಾಣಿ ವಿನಿಮಯ ಯೋಜನೆಯಡಿ ವಿಮಾನದ ಮೂಲಕ ಜಪಾನ್‌ಗೆ ಹೊರಟ ಬನ್ನೇರುಘಟ್ಟದ 4 ಆನೆಗಳು – vishwanews24

ಪ್ರಾಣಿ ವಿನಿಮಯ ಯೋಜನೆಯಡಿ ವಿಮಾನದ ಮೂಲಕ ಜಪಾನ್‌ಗೆ ಹೊರಟ ಬನ್ನೇರುಘಟ್ಟದ 4 ಆನೆಗಳು

ಬೆಂಗಳೂರು: ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ನಾಲ್ಕು ಆನೆಗಳನ್ನು ವಿಮಾನದ ಮೂಲಕ ಜಪಾನ್‌ಗೆ ಕಳುಹಿಸಿಕೊಡಲಾಯಿತು.

ಬನ್ನೇರುಘಟ್ಟ ಉದ್ಯಾನವನವು ಜಪಾನ್‌ನ ಹಿಮೇಜಿ ಸೆಂಟ್ರಲ್ ಪಾರ್ಕ್ನೊಂದಿಗೆ ಪ್ರಾಣಿ ವಿನಿಮಯ ಒಪ್ಪಂದ ಮಾಡಿಕೊಂಡಿದೆ. ಸುರೇಶ್ (8 ವರ್ಷ), ಗೌರಿ (9 ವರ್ಷ), ಶ್ರುತಿ (7 ವರ್ಷ) ಮತ್ತು ತುಳಸಿ (5 ವರ್ಷ) ಎಂಬ ಆನೆಗಳನ್ನು ಜಪಾನ್‌ನ ಹಿಮೇಜಿ ಸೆಂಟ್ರಲ್ ಪಾರ್ಕ್ ಗೆ ಕೊಡಲಾಗುತ್ತಿದೆ.

ಇದಕ್ಕೆ ಪ್ರತಿಯಾಗಿ ಹಿಮೇಜಿ ಸೆಂಟ್ರಲ್ ಪಾರ್ಕ್ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತಲಾ ನಾಲ್ಕು ಚಿರತೆಗಳು, ಜಾಗ್ವಾರ್‌ಗಳು, ಪೂಮಾಗಳು, ಮೂರು ಚಿಂಪಾಂಜಿಗಳು ಮತ್ತು ಎಂಟು ಕ್ಯಾಪುಚಿನ್ ಕೋತಿಗಳನ್ನು ಹಸ್ತಾಂತರಿಸಲಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ಅಧಿಕಾರಿ ವಿಶಾಲ್ ಸೂರ್ಯ ಸೇನ್ ತಿಳಿಸಿದ್ದಾರೆ.

ಆನೆಗಳನ್ನು ಕ್ರಾಲ್‌ನಲ್ಲಿ ಇರಿಸಿ ಲಾರಿಯಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿಸಲಾಯಿತು. ರಾತ್ರಿ 8 ಗಂಟೆ ಸುಮಾರಿಗೆ ಕತಾರ್ ಏರ್‌ವೇಸ್‌ನ ಸರಕು ಸಾಗಣೆ ವಿಮಾನದಲ್ಲಿ ಆನೆಗಳನ್ನು ಕೊಂಡೊಯ್ಯಲಾಯಿತು.

ವಿಮಾನದಲ್ಲಿ 8 ಗಂಟೆ ಪ್ರಯಾಣ ಬೆಳೆಸಿ ಆನೆಗಳು ಜಪಾನ್‌ನ ಒಸಾಕಾದ ಕನ್ಸಾಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿವ ಅಲ್ಲಿಂದ ಹಿಮೇಜಿ ಸೆಂಟ್ರಲ್ ಪಾರ್ಕ್‌ ರಸ್ತೆ ಮಾರ್ಗದಲ್ಲಿ ತಲುಪಲಿವೆ. ಒಟ್ಟಾರೆ 20 ಗಂಟೆಗಳ ಕಾಲ ಪ್ರಯಾಣದ ಮೂಲಕ ಆನೆಗಳನ್ನು ತಲುಪಿಸುವ ಗುರಿ ಹೊಂದಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

24 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago