ಹಾಸನ: ರಾಜ್ಯದ ನೆರೆ ಪೀಡಿತರಿಗೆ ಕೇಂದ್ರದಿಂದ ನಯಾಪೈಸೆ ಅನುದಾನ ತರದೇ ಇರುವುದು ಸೇರಿದಂತೆ ರಾಜ್ಯ ಸರ್ಕಾರ ತನ್ನ ಅನೇಕ ವಿಫಲತೆಗಳನ್ನು ಮುಚ್ಚಿಕೊಳ್ಳಲು ಪೋನ್ ಕದ್ದಾಲಿಕೆ ಪ್ರಕರಣ ತೆಗೆದು ಚುಂಚನಗಿರಿ ಶ್ರೀಗಳ ಹೆಸರನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ಜೆಡಿಎಸ್ ಮುಖಂಡ, ಹಿರಿಯ ಸಚಿವ ಎಚ್.ಡಿ. ರೇವಣ್ಣ ವಾಗ್ದಾಳಿ ನಡೆಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ, ನೆರೆ ಪರಿಹಾರ ಲೋಪ ಮುಚ್ಚಿ ಹಾಕಲು ಫೋನ್ ಟ್ಯಾಪಿಂಗ್ ಸೇರಿ ಬೇರೆ ಬೇರೆ ವಿವಾದ ಎತ್ತುತ್ತಿದ್ದಾರೆ ಟೀಕಿಸಿದರು.
ಶ್ರೀಗಳ ಪೋನ್ ಟ್ಯಾಪಿಂಗ್ ಮಾಡುವ ಅಗತ್ಯವಿಲ್ಲ, 7 ವರ್ಷಗಳಿಂದ ಅಧಿಕಾರ ಇಲ್ಲದ ಕಾರಣ ಖಾಲಿಯಾಗಿದ್ದ ತಮ್ಮ ಖಜಾನೆಯನ್ನು ತುಂಬಿಸಿಕೊಳ್ಳಲು ಮುಖ್ಯಮಂತ್ರಿಗಳು ತಮ್ಮ ಸುಪುತ್ರ ವಿಜೇಂದ್ರರನ್ನು ಮುಂದೆ ಬಿಟ್ಟಿದ್ದಾರೆ. ತಂದೆ ಸೂಚನೆಯಂತೆ ವರ್ಗಾವಣೆ ದಂಧೆಯಲ್ಲಿ ನಿರತರಾಗಿರುವ ವಿಜೇಂದ್ರ, ಸ್ವಾಮೀಜಿಗಳ ಪೋನ್ ಕದ್ದಾಲಿಕೆ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.
ಆದಿಚುಂಚನಗಿರಿ ಮಠಕ್ಕೆ ಒಕ್ಕಲಿಗರ ಜೊತೆ ಎಲ್ಲ ಜನಾಂಗಗಳ ಭಕ್ತರು ಇದ್ದಾರೆ. ಅವರು ಸ್ವಾಮೀಜಿಗಳ ಯೋಗಕ್ಷೇಮ ನೋಡಿಕೊಳ್ಳುತ್ತಾರೆ. ಸ್ವಾಮೀಜಿ ಪೋನ್ ಕದ್ದಾಲಿಕೆ ಬಗ್ಗೆ ವಿಜೇಂದ್ರ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಬಿಜೆಪಿ ನಾಯಕರು ಮೊದಲು ಕೇಂದ್ರದಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿಸಲಿ ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಅತಿವೃಷ್ಟಿಹಾನಿಯಿಂದ ಕಷ್ಟಕ್ಕೆ ಈಡಾಗಿರುವ 12 ಜಿಲ್ಲೆಗಳ ಲಕ್ಷಾಂತರ ಕುಟುಂಬಗಳಿಗೆ ಈ ವರೆಗೂ ಕೇಂದ್ರದಿಂದ ಬಿಡಿಗಾಸು ಬಂದಿಲ್ಲ. ನೆರೆಯಿಂದ ರಾಜ್ಯದಲ್ಲಿ 35 ಸಾವಿರ ಕೋಟಿ ರು. ರಾಜ್ಯ ಸರ್ಕಾರವೇ ಕೇಂದ್ರಕ್ಕೆ ವರದಿ ನೀಡಿದೆ. ಕೇಂದ್ರದಿಂದ ಹಣ ತರಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಪರಿಹಾರ ತರದೇ ಇರುವ ಬಿಜೆಪಿಯವರಿಗೆ ಅಧಿಕಾರ ನಡೆಸಲು ನೈತಿಕತೆ ಇಲ್ಲ ಎಂದು ರೇವಣ್ಣ ಖಂಡಿಸಿದರು.
ಹಿಂಬಾಗಿಲಿನಿಂದ ಬಿಜೆಪಿ ಅಧಿಕಾರಕ್ಕೆ ಬಂದು ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಪ್ರಾದೇಶಿಕ ಪಕ್ಷ ಜೆಡಿಎಸ್ ಮುಗಿಸಲು ರಾಷ್ಟ್ರೀಯ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ. ಅದು ಅವರಿಗೆ ತಿರುಗು ಮುರುವಾಗಲಿದೆ. ವಿಧಾನಸಭೆ ಅಧಿವೇಶನವನ್ನು ಕನಿಷ್ಠ 15 ದಿನಗಳವರೆಗೆ ನಡೆಸಬೇಕೆಂದು ಒತ್ತಾಯಿಸಿದರು.
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…
ಎ.2ರಂದು ದ.ಕ. ಜಿಲ್ಲಾ ಎಸ್ಪಿ ಡಾ.ಅರುಣ್ ಕೆ., ಎಸಿಪಿ ನಜ್ಮಾ ಫಾರೂಕಿಗೆ ಸಿಎಂ ಪದಕ ಪ್ರದಾನ ಮಂಗಳೂರು: ದಕ್ಷಿಣ ಕನ್ನಡ…