Featured

ಪ್ರಾದೇಶಿಕ ಪಕ್ಷ ಜೆಡಿಎಸ್‌ ಮುಗಿಸಲು ರಾಷ್ಟ್ರೀಯ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ : ಎಚ್‌.ಡಿ. ರೇವಣ್ಣ -Vishwanews24

ಹಾಸನ: ರಾಜ್ಯದ ನೆರೆ ಪೀಡಿತರಿಗೆ ಕೇಂದ್ರದಿಂದ ನಯಾಪೈಸೆ ಅನುದಾನ ತರದೇ ಇರುವುದು ಸೇರಿದಂತೆ ರಾಜ್ಯ ಸರ್ಕಾರ ತನ್ನ ಅನೇಕ ವಿಫಲತೆಗಳನ್ನು ಮುಚ್ಚಿಕೊಳ್ಳಲು ಪೋನ್‌ ಕದ್ದಾಲಿಕೆ ಪ್ರಕರಣ ತೆಗೆದು ಚುಂಚನಗಿರಿ ಶ್ರೀಗಳ ಹೆಸರನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ಜೆಡಿಎಸ್‌ ಮುಖಂಡ, ಹಿರಿಯ ಸಚಿವ ಎಚ್‌.ಡಿ. ರೇವಣ್ಣ ವಾಗ್ದಾಳಿ ನಡೆಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ, ನೆರೆ ಪರಿಹಾರ ಲೋಪ ಮುಚ್ಚಿ ಹಾಕಲು ಫೋನ್‌ ಟ್ಯಾಪಿಂಗ್‌ ಸೇರಿ ಬೇರೆ ಬೇರೆ ವಿವಾದ ಎತ್ತುತ್ತಿದ್ದಾರೆ ಟೀಕಿಸಿದರು.

ಶ್ರೀಗಳ ಪೋನ್‌ ಟ್ಯಾಪಿಂಗ್‌ ಮಾಡುವ ಅಗತ್ಯವಿಲ್ಲ, 7 ವರ್ಷಗಳಿಂದ ಅಧಿಕಾರ ಇಲ್ಲದ ಕಾರಣ ಖಾಲಿಯಾಗಿದ್ದ ತಮ್ಮ ಖಜಾನೆಯನ್ನು ತುಂಬಿಸಿಕೊಳ್ಳಲು ಮುಖ್ಯಮಂತ್ರಿಗಳು ತಮ್ಮ ಸುಪುತ್ರ ವಿಜೇಂದ್ರರನ್ನು ಮುಂದೆ ಬಿಟ್ಟಿದ್ದಾರೆ. ತಂದೆ ಸೂಚನೆಯಂತೆ ವರ್ಗಾವಣೆ ದಂಧೆಯಲ್ಲಿ ನಿರತರಾಗಿರುವ ವಿಜೇಂದ್ರ, ಸ್ವಾಮೀಜಿಗಳ ಪೋನ್‌ ಕದ್ದಾಲಿಕೆ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

ಆದಿಚುಂಚನಗಿರಿ ಮಠಕ್ಕೆ ಒಕ್ಕಲಿಗರ ಜೊತೆ ಎಲ್ಲ ಜನಾಂಗಗಳ ಭಕ್ತರು ಇದ್ದಾರೆ. ಅವರು ಸ್ವಾಮೀಜಿಗಳ ಯೋಗಕ್ಷೇಮ ನೋಡಿಕೊಳ್ಳುತ್ತಾರೆ. ಸ್ವಾಮೀಜಿ ಪೋನ್‌ ಕದ್ದಾಲಿಕೆ ಬಗ್ಗೆ ವಿಜೇಂದ್ರ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಬಿಜೆಪಿ ನಾಯಕರು ಮೊದಲು ಕೇಂದ್ರದಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿಸಲಿ ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಅತಿವೃಷ್ಟಿಹಾನಿಯಿಂದ ಕಷ್ಟಕ್ಕೆ ಈಡಾಗಿರುವ 12 ಜಿಲ್ಲೆಗಳ ಲಕ್ಷಾಂತರ ಕುಟುಂಬಗಳಿಗೆ ಈ ವರೆಗೂ ಕೇಂದ್ರದಿಂದ ಬಿಡಿಗಾಸು ಬಂದಿಲ್ಲ. ನೆರೆಯಿಂದ ರಾಜ್ಯದಲ್ಲಿ 35 ಸಾವಿರ ಕೋಟಿ ರು. ರಾಜ್ಯ ಸರ್ಕಾರವೇ ಕೇಂದ್ರಕ್ಕೆ ವರದಿ ನೀಡಿದೆ. ಕೇಂದ್ರದಿಂದ ಹಣ ತರಲು ರಾಜ್ಯ ಸರ್ಕಾರ ವಿಫಲವಾಗಿದ್ದು, ಪರಿಹಾರ ತರದೇ ಇರುವ ಬಿಜೆಪಿಯವರಿಗೆ ಅಧಿಕಾರ ನಡೆಸಲು ನೈತಿಕತೆ ಇಲ್ಲ ಎಂದು ರೇವಣ್ಣ ಖಂಡಿಸಿದರು.

ಹಿಂಬಾಗಿಲಿನಿಂದ ಬಿಜೆಪಿ ಅಧಿಕಾರಕ್ಕೆ ಬಂದು ದ್ವೇಷ ರಾಜಕಾರಣ ಮಾಡಲಾಗುತ್ತಿದ್ದು, ಪ್ರಾದೇಶಿಕ ಪಕ್ಷ ಜೆಡಿಎಸ್‌ ಮುಗಿಸಲು ರಾಷ್ಟ್ರೀಯ ಪಕ್ಷಗಳು ಷಡ್ಯಂತ್ರ ಮಾಡುತ್ತಿವೆ. ಅದು ಅವರಿಗೆ ತಿರುಗು ಮುರುವಾಗಲಿದೆ. ವಿಧಾನಸಭೆ ಅಧಿವೇಶನವನ್ನು ಕನಿಷ್ಠ 15 ದಿನಗಳವರೆಗೆ ನಡೆಸಬೇಕೆಂದು ಒತ್ತಾಯಿಸಿದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

11 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

15 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

16 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

16 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago