Featured

ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಚಿನ್ನದ ಗಣಿ ಪ್ರದೇಶದಲ್ಲಿ ಹಳೇ ವೈಭವ ಮರುಕಳಿಸಲಿದೆ : ಹೆಚ್‌ಡಿಕೆ ಘೋಷಣೆ – Vishwanews24

ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಚಿನ್ನದ ಗಣಿ ಪ್ರದೇಶದಲ್ಲಿ ಹಳೇ ವೈಭವ ಮರುಕಳಿಸಲಿದೆ : ಹೆಚ್‌ಡಿಕೆ ಘೋಷಣೆ

ಕೋಲಾರ: ಮುಂದಿನ ವಿಧಾನಸಭಾ ಚುನಾವಣೆ ತಯಾರಿಯಲ್ಲಿರುವ ಜೆಡಿಎಸ್ ಪಂಚರತ್ನ ಮೂಲಕ ರಣಕಹಳೆ ಮೊಳಗಿಸಿದೆ. ಚಿನ್ನದ ನಾಡು, ರಾಜ್ಯದ ಮೂಡಣ ದಿಕ್ಕು ಕೋಲಾರದಿಂದಲೇ ಯಾತ್ರೆ ಆರಂಭಿಸಿದೆ. ಪ್ರಾದೇಶಿಕ ಪಕ್ಷಕ್ಕೆ ಆಶೀರ್ವಾದ ಮಾಡಿದ್ರೆ ಚಿನ್ನದ ಗಣಿ ಪ್ರದೇಶದಲ್ಲಿ ಹಳೇ ವೈಭವ ಮರುಕಳಿಸಲಿದೆ ಅನ್ನೋ ಘೋಷಣೆಯನ್ನ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಮಾಡಿದ್ದಾರೆ.

ಕೋಲಾರದಲ್ಲಿ ಈ ಹಿಂದೆ ಐದು ಕ್ಷೇತ್ರಗಳಲ್ಲಿ ಹಿಡಿತ ಹೊಂದಿದ್ದ ಜೆಡಿಎಸ್ ಇತ್ತೀಚೆಗೆ ತನ್ನ ಬಲ ಕುಸಿತದಿಂದ ನೇಪತ್ಯಕ್ಕೆ ಸರಿದಿದೆ. ಈ ಮಧ್ಯೆ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿರುವ ಜೆಡಿಎಸ್ ಪಂಚರತ್ನ ಯಾತ್ರೆ ಆರಂಭಿಸಿದೆ. ಅದರಂತೆ ಇತ್ತೀಚೆಗೆ ಕೋಲಾರದ ಕೆಜಿಎಫ್‌ನಲ್ಲಿ ಮತ್ತೆ ಹಿಡಿತ ಸಾಧಿಸುವ ನಿಟ್ಟಿನಲ್ಲಿ ಅಭ್ಯರ್ಥಿ ಹುಡುಕಾಟದಲ್ಲಿದ್ದಾರೆ ದಳಪತಿಗಳು. ಕೆಜಿಎಫ್ ಕ್ಷೇತ್ರದಲ್ಲಿ ಹಿಂದೆ ದಿವಂಗತ ಭಕ್ತವತ್ಸಲಂ ಎರಡು ಭಾರಿ ಜೆಡಿಎಸ್ ಶಾಸಕರಾಗಿ ಆಯ್ಕೆಯಾಗಿದ್ದವರು.

ಆದ್ರೆ ಅವರ ನಿಧನದ ನಂತರ ಕ್ಷೇತ್ರದಲ್ಲಿ ಜೆಡಿಎಸ್‌ಗೆ ನಾಯಕನಿಲ್ಲದೆ ಹಿನ್ನಡೆಯಾಗಿದೆ. ಪರಿಣಾಮ ಈ ಬಾರಿ ಚುನಾವಣಾ ದೃಷ್ಟಿಯಿಂದ ಇತ್ತೀಚೆಗೆ ಕೆಜಿಎಫ್‌ಗೆ ಆಗಮಿಸಿದ್ದ ಹೆಚ್‌ಡಿಕೆ, ಕೆಜಿಎಫ್ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನ ಗೆಲ್ಲಿಸಿಕೊಡುವಂತೆ ಮನವಿ ಮಾಡಿದ್ದಾರೆ. ಜೆಡಿಎಸ್ ಟಿಕೆಟ್ ಅಭ್ಯರ್ಥಿ ಯಾರೆಂದು ಘೋಷಣೆ ಮಾಡದೆ ಈ ಬಾರಿ ಜೆಡಿಎಸ್‌ಗೆ ಅಧಿಕಾರ ಕೊಟ್ಟಿದ್ದೇ ಆದಲ್ಲಿ ಸ್ತ್ರೀಶಕ್ತಿ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಇನ್ನೂ ಹೆಚ್ಚಾಗಿ ನಗರ ಭಾಗದಲ್ಲಿಯೇ ಮತದಾರರಿದ್ದು, ಅದರಲ್ಲೂ ತಮಿಳು ಭಾಷಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇದೆ. ಹೀಗಾಗಿ ತಮಿಳು ಭಾಷಿಗರ ಮನಗೆಲ್ಲುವ ಅಭ್ಯರ್ಥಿಯನ್ನೆ ಆಯ್ಕೆ ಮಾಡಬೇಕಾದ ಅನಿವಾರ್ಯತೆ ಎಲ್ಲ ಪಕ್ಷಗಳಿಗೂ ಇದೆ. ಮಾತ್ರವಲ್ಲದೆ ಗ್ರಾಮೀಣ ಭಾಗ ಅಂದ್ರೆ ಬೇತಮಂಗಲ ಹಾಗೂ ಕ್ಯಾಸಂಬಳ್ಳಿ ಹೋಬಳಿಯಲ್ಲಿ ರೈತಾಪಿ ವರ್ಗ ಹೆಚ್ಚಾಗಿದ್ದು. ಎರಡೂ ವರ್ಗಗಳ ಮತದಾರರನ್ನು ಸೆಳೆಯಬಲ್ಲ ಅಭ್ಯರ್ಥಿಯನ್ನ ಆಯ್ಕೆ ಮಾಡುವ ನಿಟ್ಟಿನಲ್ಲಿ ಉದ್ಯಮಿ ರಮೇಶ್ ಬಾಬು ತಮ್ಮ ಬೆಂಬಲಿಗರೊಂದಿಗೆ ನಗರದಲ್ಲಿ ಪಂಚರತ್ನ ಸಮಾವೇಶ ಆಯೋಜಿಸಿದ್ರೆ, ವಕೀಲ ಸುರೇಶ್ ಎಂಬುವವರು ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂದು ಬೆಂಬಲಿಗರು ಒತ್ತಾಯ ಮಾಡಿದ್ದಾರೆ. ಹಾಗಾಗಿ ಇಲ್ಲಿ ಅಭ್ಯರ್ಥಿ ಯಾರೆಂದು ಘೋಷಣೆ ಮಾಡದೆ, ಒಂದು ಭಾರಿ ಪ್ರಾದೇಶಿಕ ಪಕ್ಷಕ್ಕೆ ಆದ್ಯತೆ ನೀಡಿದ್ದೇ ಆದಲ್ಲಿ ಕೆಜಿಎಫ್ ಗತ ವೈಭವವನ್ನ ಮರುಕಳಿಸುವಂತೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

12 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

13 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

13 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

13 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

13 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

14 hours ago