ಹುಬ್ಬಳ್ಳಿ: ದೇಶದಲಿ ಯಾರು ಪ್ರಾಮಾಣಿಕರೋ ಅವರಿಗೆ ಮೋದಿ ಇಷ್ಟವಾಗುತ್ತಾರೆ. ಅವರಿಗೆ ಮೋದಿ ಎಂದರೆ ನಂಬಿಕೆ ಇದೆ. ಆದರೆ ಯಾರು ಭ್ರಷ್ಟರೋ ಅವರಿಗೆ ಮೋದಿ ಅಂದರೆ ಕಷ್ಟ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಭಾಷಣದ ಆರಂಭದಲ್ಲಿ ಕನ್ನಡದಲ್ಲಿಯೇ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, “ಈ ಭೂಮಿ, ತ್ಯಾಗ, ಸಾಹಸ, ಶೌರ್ಯ, ಇತಿಹಾಸ, ಸಂಸ್ಕೃತಿಗೆ ಹೆಸರು. ನನಗೆ ಈ ಪುಣ್ಯ, ಪವಿತ್ರ ಭೂಮಿಗೆ ಬಂದಿದ್ದಕ್ಕೆ ರೋಮಾಂಚನವಾಗಿದೆ” ಎಂದು ನುಡಿದರು. ಅಲ್ಲದೆ, ಕಿತ್ತೂರು ರಾಣಿ ಚೆನ್ನಮ್ಮ, ಭಕ್ತ ಕವಿ ಕನಕದಾಸ, ಸಂಗೊಳ್ಳಿ ರಾಯಣ್ಣ, ದ.ರಾ. ಬೇಂದ್ರ, ಗಂಗೂಭಾಯಿ ಹಾನಗಲ್, ಪಂಡಿತ್ ಭೀಮಸೇನ ಜೋಷಿ ಅವರಂಥ ಮಹಾನ್ ವ್ಯಕ್ತಿಗಳನ್ನು ನೀಡಿದ ಹುಬ್ಬಳ್ಳಿ-ಧಾರವಾಡ ನಿಜಕ್ಕೂ ಪುಣ್ಯ ಭೂಮಿಯಾದಾಗಿದೆ ಎಂದರು.
ಮುಂಬರುವ ಲೋಕಸಭಾ ಚುನಾವಣೆಗೆ ಇಂದು ಹುಬ್ಬಳ್ಳಿಯ ಕೆಎಲ್‌ಇ ಮೈದಾನದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ರಣಕಹಳೆ ಊದಿದ ಪ್ರಧಾನಿ ಮೋದಿ, ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಮತ್ತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದು ಎರಡೂ ರಾಜಕೀಯ ಪಕ್ಷಗಳೂ ಕಿತ್ತಾಡಿಕೊಳ್ಳುತ್ತಿವೆ. ಶಾಸಕರು ರೆಸಾರ್ಟ್ ರಾಜಕಾರಣ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಈ ರಾಜ್ಯದ ಸಿಎಂ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೆ ಕೇವಲ 60 ಸಾವಿರ ರೈತರ ಸಾಲಮನ್ನಾ ಮಾತ್ರ. ಇದರಲ್ಲೇ ಗೊತ್ತಾಗುತ್ತೆ ರಾಜ್ಯ ಸರ್ಕಾರದ ಯೋಗ್ಯತೆಯೇನು ಎಂಬುದು ಎಂದು ಮೋದಿ ಕಿಡಿ ಕಾರಿದರು.
ಇಲ್ಲಿನ ಮುಖ್ಯಮಂತ್ರಿ ಮಜಬೂರಿ ಮುಖ್ಯಮಂತ್ರಿ. ಜನರನ್ನು ಹಾದಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮಾತು ಮಾತಿಗೂ ಕಣ್ಣೀರು ಹಾಕುವ ಇಂಥಾ ಮುಖ್ಯಮಂತ್ರಿ ಮತ್ತು ಇಂಥಾ ಸರ್ಕಾರ ಎಲ್ಲಿಯೂ ಇಲ್ಲ. ಈ ಸರ್ಕಾರ ಅಧಿಕಾರದಲ್ಲಿದ್ದು ಏನೂ ಪ್ರಯೋಜನವಿಲ್ಲ. ಹಾಗಾಗಿ ಈಗಾಗಲೇ ಹಲವು ಭರವಸೆಗಳನ್ನು ಈಡೇರಿಸಿರುವ, ನವ ಭಾರತದ ಕನಸುಗಳನ್ನು ಸಾಕಾರಗೊಳಿಸಲು ಹೊರಟಿರುವ ನಮ್ಮ ಸರಕಾರ(ಬಿಜೆಪಿ)ಕ್ಕೆ ಜನತೆ ಮತ ಹಾಕಿ. ಒಳ್ಳೇದು ಬೇಕೋ? ಕೆಟ್ಟದ್ದು ಬೇಕೋ? ನಿಮ್ಮ ಸರ್ಕಾರವನ್ನು ನೀವೇ ಆಯ್ಕೆ ಮಾಡಿಕೊಳ್ಳಿ ಎಂದು ಮೋದಿ ಹೇಳಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…