Featured

ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲ : ಎಸ್. ಅಂಗಾರ – Vishwanews24

ನಾನು ಇನ್ನು ರಾಜಕಾರಣದಲ್ಲಿಲ್ಲ, ಚುನಾವಣಾ ಪ್ರಚಾರದಲ್ಲೂ ಇರುವುದಿಲ್ಲ..

ನನ್ನ ಪ್ರಾಮಾಣಿಕತೆಯೇ  ರಾಜ್ಯ ರಾಜಕಾರಣದಲ್ಲಿ ನನಗೆ ಮುಳುವಾಗಿದೆ..

ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು..

ಬೆಂಗಳೂರು: ಇಷ್ಟು ವರ್ಷ ಪಕ್ಷಕ್ಕಾಗಿ ದುಡಿದವರಿಗೆ ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದ್ದು, ನಾನು ರಾಜಕೀಯ ನಿವೃತ್ತಿ ಘೋಷಿಸುತ್ತಿದ್ದೇನೆ. ನಾನು ಈಗ ರಾಜಕಾರಣದಲ್ಲಿಲ್ಲ. ಆದ್ದರಿಂದ ಹೊಸ ಅಭ್ಯರ್ಥಿ ಹಾಗೂ ಅವರ ಗೆಲುವಿನ ಬಗ್ಗೆ ಪಕ್ಷವೇ ನೋಡಿಕೊಳ್ಳಬಹುದು ಎಂದು ಶಾಸಕ ಎಸ್. ಅಂಗಾರ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ. ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಯಾವುದೇ ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ಈಗ ರಾಜ್ಯ ರಾಜಕಾರಣದಲ್ಲಿ ನನಗೆ ಮುಳುವಾಗಿದೆ ಎಂದು ಬಿಜೆಪಿ ಹೈಕಮಾಂಡ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ರಾಜಕಾರಣದಲ್ಲಿ ಬಿಜೆಪಿಯಿಂದ ಟಿಕೆಟ್‌ ಪಡೆಯುವುದಕ್ಕೆ ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಆದರೆ, ಟಿಕೆಟ್‌ಗೆ ಲಾಬಿ ಮಾಡಿದರುವುದೇ ನನಗೆ ತೀವ್ರ ಹಿನ್ನಡೆಯಾಯಿತು. ಇನ್ನು ನಾನು ಈಗಾಗಲೇ ರಾಜಕೀಯ ನಿವೃತ್ತಿ ಘೋಷಣೆ ಮಾಡಿಯಾಗಿದೆ. ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ನಾನು ಇರುವುದಿಲ್ಲ. ಈಗ ಬಿಜೆಪಿ ಪಟ್ಟಿಯಲ್ಲಿ ಘೋಷಣೆ ಮಾಡಿರುವ ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಖಾರವಾಗಿಯೇ ಹೇಳಿದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

16 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

16 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

17 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

17 hours ago