ಹಾಸನ: ಪ್ರೀತಿಯಲ್ಲಿ ವಿರಸ ಮೂಡಿದ ಹಿನ್ನೆಲೆಯಲ್ಲಿ ಪ್ರಿಯತಮೆಯು ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ನಗರದ ಬಿ.ಎಂ. ರಸ್ತೆ ಪ್ರತಿಷ್ಠಿತ ಖಾಸಗಿ ಹೋಟೆಲ್ ಎದುರು ಬುಧವಾರ ರಾತ್ರಿ ನಡೆದಿದೆ.
ಇರಿತಕ್ಕೆ ಒಳಗಾಗಿರುವ ಮನುಕುಮಾರ್ (25) ಸ್ಥಿತಿ ಗಂಭೀರವಾಗಿದ್ದು ಹಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ತಾಲೂಕಿನ ಎ.ಗುಡುಗನ ಹಳ್ಳಿಯ ಮನುಕುಮಾರ್, ಭವಾನಿ ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರೀತಿಸುತ್ತಿದ್ದರು. ಇತ್ತೀಚೆಗೆ ವಿರಸ ಮೂಡಿತ್ತು. ಬುಧವಾರ ರಾತ್ರಿ ಹೊಸ ವರ್ಷಾಚರಣೆಗೆ ಸ್ನೇಹಿತರ ಜೊತೆ ಹೋಟೆಲ್‌ಗೆ ಮನುಕುಮಾರ್ ಹೋಗಿದ್ದು ಈ ವಿಷಯ ತಿಳಿದಿದ್ದ ಭವಾನಿ, ಪ್ರಿಯಕರನಿಗೆ ಪದೇ ಪದೆ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಭವಾನಿಯೇ ಹೋಟೆಲ್ ಗೇಟ್ ಒಳಗೆ ಹೋದಾಗ ಮನುಕುಮಾರ್ ಸಿಕ್ಕಿದ್ದು, ಚಾಕುವಿನಿಂದ ಇರಿದು ಪರಾರಿಯಾಗಿದ್ದಾಳೆ.
ಸದ್ಯ ಪೊಲೀಸರು ಕೊಲೆ ಯತ್ನ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…