ಗದಗ : ಪ್ರಿಯಕರನ ಬ್ಲಾಕ್‌ಮೇಲ್ ನಿಂದಾಗಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ಮದುವೆಗೆ 8 ದಿನ ಬಾಕಿ ಇರುವಾಗಲೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.
ಸೈರಾ ಬಾನು ನದಾಫ್ (29) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ರವಿವಾರ ಪೋಷಕರು ಮದುವೆ ಸಾಮಗ್ರಿಗಳನ್ನು ತರಲು ಹೋಗಿದ್ದ ಸಂದರ್ಭ, ಸೈರಾಬಾನು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ಐದು ವರ್ಷಗಳಿಂದ ಮೈಲೇರಿ ಎಂಬಾತನನ್ನ ಪ್ರೀತಿ ಮಾಡುತಿದ್ದ ಈಕೆ ಕೆಲ ದಿನಗಳ ಹಿಂದೆ ಲವ್ ಬ್ರೇಕಪ್ ಬಳಿಕ ಮದುವೆಗೆ ಒಪ್ಪಿಕೊಂಡಿದ್ದಳು. ಆದರೆ ಶಿಕ್ಷಕಿಯ ಮದುವೆ ತಯಾರಿ ನೋಡಿ ಲವರ್ ನಿಂದ ಉಪಟಳ ಶುರುವಾಗಿದೆಯಂತೆ. ಇಬ್ಬರ ಫೋಟೋ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕ್ತಿದ್ದ ಅಂತ ಸ್ವತ: ಸೈರಾಬಾನು ತನ್ನ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾಳೆ. ಹೀಗಾಗಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾಳೆ ಎಂದು ಪಾಲಕರು ಆರೋಪಿಸಿದ್ದಾರೆ.
ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೈರಾ ಬಾನು, ನ್ಯಾಷನಲ್ ಲೆವೆಲ್ ಕುಸ್ತಿಪಟು ಆಗಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಳು. ಇಡೀ ಮನೆಯ ಜವಾಬ್ದಾರಿ ಹೊತ್ತು ಸಾಗುತ್ತಿದ್ದ ಸೈರಾಬಾನು ಲವರ್ ಟಾರ್ಚರ್ ಗೆ ಬೇಸತ್ತು ಆತಮಹತ್ಯೆ ಮಾಡಿಕೊಂಡಿದ್ದಾಳೆ.
ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…