Featured

ಪ್ರಿಯಕರನಿಂದ ನಿಂದ ಬ್ಲಾಕ್‌ಮೇಲ್ ಆರೋಪ:  ಯುವತಿ ಆತ್ಮಹತ್ಯೆ – vishwanews24

ಪ್ರಿಯಕರನಿಂದ ನಿಂದ ಬ್ಲಾಕ್‌ಮೇಲ್ ಆರೋಪ:  ಯುವತಿ ಆತ್ಮಹತ್ಯೆ

ಗದಗ : ಪ್ರಿಯಕರನ ಬ್ಲಾಕ್‌ಮೇಲ್ ನಿಂದಾಗಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ಮದುವೆಗೆ 8 ದಿನ ಬಾಕಿ ಇರುವಾಗಲೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ತಾಲೂಕಿನ ಅಸುಂಡಿ ಗ್ರಾಮದಲ್ಲಿ ನಡೆದಿದೆ.

ಸೈರಾ ಬಾನು ನದಾಫ್‌ (29) ಆತ್ಮಹತ್ಯೆ ಮಾಡಿಕೊಂಡಿರುವ ಯುವತಿ. ರವಿವಾರ ಪೋಷಕರು ಮದುವೆ ಸಾಮಗ್ರಿಗಳನ್ನು ತರಲು ಹೋಗಿದ್ದ ಸಂದರ್ಭ, ಸೈರಾಬಾನು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಳೆದ ಐದು ವರ್ಷಗಳಿಂದ ಮೈಲೇರಿ ಎಂಬಾತನನ್ನ ಪ್ರೀತಿ ಮಾಡುತಿದ್ದ ಈಕೆ ಕೆಲ ದಿನಗಳ ಹಿಂದೆ ಲವ್ ಬ್ರೇಕಪ್ ಬಳಿಕ ಮದುವೆಗೆ ಒಪ್ಪಿಕೊಂಡಿದ್ದಳು. ಆದರೆ ಶಿಕ್ಷಕಿಯ ಮದುವೆ ತಯಾರಿ ನೋಡಿ ಲವರ್ ನಿಂದ ಉಪಟಳ ಶುರುವಾಗಿದೆಯಂತೆ. ಇಬ್ಬರ ಫೋಟೋ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ ಹಾಕ್ತಿದ್ದ ಅಂತ ಸ್ವತ: ಸೈರಾಬಾನು ತನ್ನ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾಳೆ. ಹೀಗಾಗಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾಳೆ ಎಂದು ಪಾಲಕರು ಆರೋಪಿಸಿದ್ದಾರೆ.

ಖಾಸಗಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೈರಾ ಬಾನು, ನ್ಯಾಷನಲ್ ಲೆವೆಲ್ ಕುಸ್ತಿಪಟು ಆಗಿ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಳು. ಇಡೀ ಮನೆಯ ಜವಾಬ್ದಾರಿ ಹೊತ್ತು ಸಾಗುತ್ತಿದ್ದ ಸೈರಾಬಾನು ಲವರ್ ಟಾರ್ಚರ್ ಗೆ ಬೇಸತ್ತು ಆತಮಹತ್ಯೆ ಮಾಡಿಕೊಂಡಿದ್ದಾಳೆ.

ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago