ಹಾಸನ: ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಯುವತಿ ಪೊಲೀಸರಿಗೆ ಮೆಸೇಜ್ ಮಾಡಿರುವ ಸ್ಕ್ರೀನ್ಶಾಟ್ ವೈರಲ್ ಆಗಿದೆ.
ಚಾಕು ಇರಿತಕ್ಕೆ ಒಳಗಾದ ಯುವಕ ಮನುಕುಮಾರ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಆರೋಪಿ ಯುವತಿಗೆ ಹದಿನಾಲ್ಕು ದಿನಗಳ ನ್ಯಾಯಂಗ ಬಂಧನ ವಿಧಿಸಲಾಗಿದೆ.
ಮೆಸೇಜ್ನಲ್ಲಿ ಏನಿದೆ?
ಮನುಕುಮಾರ್ಗೂ ನನಗೂ ಮದುವೆ ಆಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ನೋಂದಣಿ ಮಾಡಿಸಿಕೊಂಡಿದ್ದೇವೆ ಎಂದು ಮದುವೆ ಸರ್ಟಿಫಿಕೇಟ್ ಬಹಿರಂಗಗೊಳಿಸಿದ್ದಾಳೆ ಯುವತಿ. 2023 ನ. 10 ರಂದು ಮದುವೆ ಆಗಿದೆ. 2024ರ ಅ.25 ರಂದು ನೋಂದಣಿ ಮಾಡಿಸಿರುವ ದಿನಾಂಕ ಸರ್ಟಿಫಿಕೇಟ್ನಲ್ಲಿ ನಮೂದಾಗಿದೆ. ಆತ ನನ್ನೊಂದಿಗೆ ಮದುವೆ ಆಗಿ ತುಂಬಾ ಜನರ ಜೊತೆ ಅಫೇರ್ ಇಟ್ಟುಕೊಂಡಿದ್ದ. ಹೊಸ ವರ್ಷದ ಪಾರ್ಟಿಗೂ ಹುಡುಗಿ ಕರೆದುಕೊಂಡು ಹೋಗಿದ್ದ. ಅದು ಗೊತ್ತಾಗಿಯೇ ನಾನು ಅಲ್ಲಿದೆ ಹೋಗಿ ಜಗಳ ಮಾಡಿದ್ದು. ಈ ವಿಚಾರದಲ್ಲಿ ಅವರ ಮನೆಯ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. ನನಗೆ ನ್ಯಾಯಕೊಡಿಸಿ ಎಂದು ಯುವತಿ ಮೆಸೇಜ್ ಮೂಲಕ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾಳೆ.
ಚಾಕು ಇರಿತ ಕೇಸ್ನಲ್ಲಿ ಆರೋಪಿ ಯುವತಿಯನ್ನು ಬಡಾವಣೆ ಪೊಲೀಸರು ಬಂಧಿಸಿದ್ದರು. ವಿಚಾರಣೆ ನಡೆಸಿ ನಿನ್ನೆ ರಾತ್ರಿ ನಾಲ್ಕನೇ ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಹಾಸನ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಆರೋಪಿಯನ್ನು ಇರಿಸಲಾಗಿದೆ.
ಏನಿದು ಪ್ರಕರಣ?
ಜ.31 ರಂದು ತಡರಾತ್ರಿ ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್ನಲ್ಲಿ ಪ್ರಿಯಕರನಿಗೆ ಯುವತಿ ಚಾಕುವಿನಿಂದ ಇರಿದಿದ್ದಳು. ಚಾಕು ಇರಿತಕ್ಕೆ ಒಳಗಾದ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…