Featured

ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್ ;  ಪೊಲೀಸರಿಗೆ ಯುವತಿ ಮಾಡಿರುವ ಮೆಸೇಜ್ ಸ್ಕ್ರೀನ್‌ಶಾಟ್‌ ವೈರಲ್ – vishwanews24

ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್ ..

ನಮ್ಮಿಬ್ಬರಿಗೂ ಮದುವೆಯಾಗಿದೆ ಅಂತ ಪೊಲೀಸರಿಗೆ ತಿಳಿಸಿದ ಯುವತಿ ..

ನನ್ನ ಮದುವೆಯಾಗಿ ತುಂಬಾ ಹುಡುಗಿಯರ ಜೊತೆ ಅಫೇರ್ ಇಟ್ಟುಕೊಂಡಿದ್ದ ಎಂದು ಆರೋಪ..

ನನಗೆ ನ್ಯಾಯಕೊಡಿಸಿ ಎಂದು ಯುವತಿ ಮೆಸೇಜ್ ಮೂಲಕ ಪೊಲೀಸರಿಗೆ ಮನವಿ

ಹಾಸನ: ಪ್ರಿಯಕರನಿಗೆ ಪ್ರೇಯಸಿ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆರೋಪಿ ಯುವತಿ ಪೊಲೀಸರಿಗೆ ಮೆಸೇಜ್ ಮಾಡಿರುವ ಸ್ಕ್ರೀನ್‌ಶಾಟ್‌ ವೈರಲ್ ಆಗಿದೆ.

ಚಾಕು ಇರಿತಕ್ಕೆ ಒಳಗಾದ ಯುವಕ ಮನುಕುಮಾರ್ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇತ್ತ ಆರೋಪಿ ಯುವತಿಗೆ ಹದಿನಾಲ್ಕು ದಿನಗಳ ನ್ಯಾಯಂಗ ಬಂಧನ ವಿಧಿಸಲಾಗಿದೆ.

ಮೆಸೇಜ್‌ನಲ್ಲಿ ಏನಿದೆ?
ಮನುಕುಮಾರ್‌ಗೂ ನನಗೂ ಮದುವೆ ಆಗಿದೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ನೋಂದಣಿ ಮಾಡಿಸಿಕೊಂಡಿದ್ದೇವೆ ಎಂದು ಮದುವೆ ಸರ್ಟಿಫಿಕೇಟ್ ಬಹಿರಂಗಗೊಳಿಸಿದ್ದಾಳೆ ಯುವತಿ. 2023 ನ. 10 ರಂದು ಮದುವೆ ಆಗಿದೆ. 2024ರ ಅ.25 ರಂದು ನೋಂದಣಿ ಮಾಡಿಸಿರುವ ದಿನಾಂಕ ಸರ್ಟಿಫಿಕೇಟ್‌ನಲ್ಲಿ ನಮೂದಾಗಿದೆ. ಆತ ನನ್ನೊಂದಿಗೆ ಮದುವೆ ಆಗಿ ತುಂಬಾ ಜನರ ಜೊತೆ ಅಫೇರ್ ಇಟ್ಟುಕೊಂಡಿದ್ದ. ಹೊಸ ವರ್ಷದ ಪಾರ್ಟಿಗೂ ಹುಡುಗಿ ಕರೆದುಕೊಂಡು ಹೋಗಿದ್ದ. ಅದು ಗೊತ್ತಾಗಿಯೇ ನಾನು ಅಲ್ಲಿದೆ ಹೋಗಿ ಜಗಳ ಮಾಡಿದ್ದು. ಈ ವಿಚಾರದಲ್ಲಿ ಅವರ ಮನೆಯ ಎಲ್ಲರೂ ಸುಳ್ಳು ಹೇಳುತ್ತಿದ್ದಾರೆ. ನನಗೆ ನ್ಯಾಯಕೊಡಿಸಿ ಎಂದು ಯುವತಿ ಮೆಸೇಜ್ ಮೂಲಕ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾಳೆ.

ಚಾಕು ಇರಿತ ಕೇಸ್‌ನಲ್ಲಿ ಆರೋಪಿ ಯುವತಿಯನ್ನು ಬಡಾವಣೆ ಪೊಲೀಸರು ಬಂಧಿಸಿದ್ದರು. ವಿಚಾರಣೆ ನಡೆಸಿ ನಿನ್ನೆ ರಾತ್ರಿ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಹಾಸನ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಆರೋಪಿಯನ್ನು ಇರಿಸಲಾಗಿದೆ.

ಏನಿದು ಪ್ರಕರಣ?
ಜ.31 ರಂದು ತಡರಾತ್ರಿ ಹಾಸನ ನಗರದ ಬಿ.ಎಂ. ರಸ್ತೆಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಪ್ರಿಯಕರನಿಗೆ ಯುವತಿ ಚಾಕುವಿನಿಂದ ಇರಿದಿದ್ದಳು. ಚಾಕು ಇರಿತಕ್ಕೆ ಒಳಗಾದ ಯುವಕ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

30 seconds ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 minutes ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

28 minutes ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

4 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

4 hours ago