ಬೆಳಗಾವಿ: ಪ್ರಿಯಕರನ ಜೊತೆ ಓಡಿಹೋಗಲು ಪತಿ ಮನೆಗೆ ಕನ್ನ ಹಾಕಿದ್ದ ಪತ್ನಿಯನ್ನ ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟಿ ಗ್ರಾಮದಲ್ಲಿ ನಡೆದಿದೆ.
ಪ್ರಿಯಕರನ ಜೊತೆ ಸೇರಿದ ಹೈನಾತಿ ಹೆಂಡ್ತಿ ಗಂಡನ ಮನೆಯಲ್ಲಿಯೇ 21 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದಾಳೆ. ಸದ್ಯ ಪೊಲೀಸರ ಅತಿಥಿಯಾಗಿದ್ದಾಳೆ. ಹಣಮಂತ ಮಾರಾಪೂರ, ಹಸೀನಾ ನದಾಫ್ ಬಂಧಿತರು. ಬಂಧಿತರಿಂದ 11 ಸಾವಿರ ಮೌಲ್ಯದ 45 ಗ್ರಾಂ ಬೆಳ್ಳಿಯ ಆಭರಣ ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ:
ಮೊದಲು ಕಳ್ಳತನದ ಬಗ್ಗೆ ದಿಲ್ಶಾನ್ ನದಾಫ್ ಎಂಬುವವರು ಕಟಕೋಳ ಠಾಣೆಗೆ ದೂರು ನೀಡಿದ್ದರು. ದೂರು ಪಡೆದ ಪೊಲೀಸರು ಕೃತ್ಯ ನಡೆದ 48 ಗಂಟೆಯಲ್ಲಿ ಕಳ್ಳತನ ಮಾಡಿದ್ದ ಪ್ರೇಮಿಗಳನ್ನ ಬಂಧಿಸಿದ್ದಾರೆ. ರಾಮದುರ್ಗ ಸಿಪಿಐ ವಿನಾಯಕ ಬಡಿಗೇರ ಮತ್ತು ಪಿಎಸ್‌ಐ ಬಸವರಾಜ್ ಕೊಣ್ಣೂರೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದರು.
ಹಸೀನಾ ಮೂಲತಃ ಮೂಡಲಗಿ ತಾಲೂಕಿನವಳು. ಕಳೆದ ಎರಡು ತಿಂಗಳ ಹಿಂದೆ ಹೊಸಕೋಟಿ ಗ್ರಾಮದ ಶರೀಫ್ ಜೊತೆಗೆ ಮದುವೆಯಾಗಿತ್ತು. ಮದುವೆಯ ನಂತರವೂ ಸಹ ಪ್ರಿಯಕರನ ಸಂಪರ್ಕದಲ್ಲಿ ಹಸೀನಾ ಇದ್ದಳು. ಕೊನೆಗೆ ಪ್ರಿಯಕರನ ಜೊತೆ ಓಡಿಹೋಗುವ ಪ್ಲ್ಯಾನ್ ಮಾಡಿದ್ದ ಆಕೆ ಗಂಡನ ಮನೆಗೆ ಕನ್ನ ಹಾಕಿದ್ದಳು. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಹಟ್ಟಿದ್ದಾರೆ.
ಇದನ್ನೂ ಓದಿ:
ಈ ಕುರಿತು ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರ ಕಾರ್ಯಕ್ಕೆ ಎಸ್ಪಿ ಕೆ ರಾಮರಾಜನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…
ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ ಹೊಸದಿಲ್ಲಿ: ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎನ್.ಎಸ್.…