ಬೆಂಗಳೂರು: ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರೇಯಿಸಿ ಕೂಡ ಆತ್ಮಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ರಾಚೇನಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಜಾನ್ಸನ್ ಹಾಗೂ ದಿಲ್ಶಾದ್ ಎಂದು ಗುರುತಿಸಲಾಗಿದೆ. ಥಣಿಸಂದ್ರ ಮೂಲದ ಜಾನ್ಸನ್ ಎಂಬುವವನನ್ನು ದಿಲ್ಶಾದ್ ಪ್ರೀತಿಸುತ್ತಿದ್ದಳು. ಆದರೆ ಮಹಿಳೆಗೆ ವಿಜಯಪುರ ಮೂಲದ ಕೃಷ್ಣ ಎಂಬುವವರ ಜೊತೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಆಕೆಯ ಗಂಡ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ.
ಆದಾಗ್ಯೂ ಜಾನ್ಸನ್ -ದಿಲ್ಶಾದ್ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂದು ಜಾನ್ಸನ್ ಮನನೊಂದಿದ್ದ. ಇಂದು ಬೆಳಗ್ಗೆ ಕೆಲಸಕ್ಕೆ ಹೋದ ಜಾಗದಲ್ಲಿ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದ. ಅಲ್ಲಿಗೆ ಹೋಗಿದ್ದ ದಿಲ್ಶಾದ್ ಶವ ನೋಡಿಕೊಂಡು ಬಂದಿದ್ದಳು. ಜಾನ್ಸನ್ ಆತ್ಮಹತ್ಯೆಯಿಂದ ಮನನೊಂದಿದ್ದ ಮಹಿಳೆ ಮಧ್ಯಾಹ್ನದ ವೇಳೆಗೆ ತಾನೂ ನೇಣಿಗೆ ಶರಣಾಗಿದ್ದಾಳೆ.
ಪ್ರಿಯಕರನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನೂ ಮಹಿಳೆಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…