Featured

ಪ್ರಿಯಾಂಕಾ ವಾರಣಾಸಿಯಿಂದ ಸ್ಪರ್ಧಿಸಿದ್ದರೆ ಪ್ರಧಾನಿ ಮೋದಿ ಸೋಲುತ್ತಿದ್ದರು : ರಾಹುಲ್‌ ಗಾಂಧಿ – vishwanews24

ಪ್ರಿಯಾಂಕಾ ವಾರಣಾಸಿಯಿಂದ ಸ್ಪರ್ಧಿಸಿದ್ದರೆ ಪ್ರಧಾನಿ ಮೋದಿ  ಸೋಲುತ್ತಿದ್ದರು : ರಾಹುಲ್‌ ಗಾಂಧಿ

ಲಕ್ನೋ : ಸಹೋದರಿ ಪ್ರಿಯಾಂಕಾ  ಅವರು ವಾರಣಾಸಿಯಿಂದ  ಲೋಕಸಭೆಗೆ ಸ್ಪರ್ಧಿಸಿದ್ದರೆ ಪ್ರಧಾನಿ ನರೇಂದ್ರ ಮೋದಿ  ಎರಡರಿಂದ ಮೂರು ಲಕ್ಷ ಮತಗಳ ಅಂತರದಿಂದ ಸೋಲುತ್ತಿದ್ದರು ಎಂದು ಸಂಸದ ರಾಹುಲ್‌ ಗಾಂಧಿ ಹೇಳಿದ್ದಾರೆ.

ರಾಯ್‌ಬರೇಲಿ  ನಡೆದ ಕೃತಜ್ಞತಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ವಾರಣಾಸಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಮೋದಿ ಅವರ ಅವರ ರಾಜಕೀಯವನ್ನು ಜನರು ತಿರಸ್ಕರಿಸುತ್ತಾರೆ ಎಂದು ತಿಳಿಸಿದರು.

ಹಿಂಸಾಚಾರ ಮತ್ತು ದ್ವೇಷದ ರಾಜಕಾರಣದಲ್ಲಿ ಬಹಿರಂಗವಾಗಿ ತೊಡಗಿರುವ ಪ್ರಧಾನಿಗೆ ಉತ್ತರ ಪ್ರದೇಶದ ಜನರು ಉತ್ತರ ನೀಡಿದ್ದಕ್ಕೆ ನಾನು ಹೆಮ್ಮೆ ಪಡುತ್ತೇನೆ. ಕಾಂಗ್ರೆಸ್ ಪಕ್ಷವು ರಾಯ್‌ಬರೇಲಿ, ಅಮೇಥಿ ಸೇರಿದಂತೆ ಉತ್ತರ ಪ್ರದೇಶ ಮತ್ತು ಭಾರತದಾದ್ಯಂತ ಒಗ್ಗಟ್ಟಿನಿಂದ ಹೋರಾಡಿದೆ, ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಚುನಾವಣೆಯನ್ನು ಎದುರಿಸಿದ್ದರಿಂದ ಈ ಗೆಲುವು ಸಿಕ್ಕಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ತಮಿಳುನಾಡು, ಉತ್ತರ ಪ್ರದೇಶ, ಮಣಿಪುರ, ರಾಜಸ್ಥಾನ, ಕರ್ನಾಟಕ, ತೆಲಂಗಾಣ ಸೇರಿದಂತೆ ಈ ಚುನಾವಣೆಯಲ್ಲಿ ದೇಶದ ಪ್ರತಿಯೊಂದು ರಾಜ್ಯವೂ ಒಗ್ಗೂಡಿದೆ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಭಾರತದ ಅಡಿಪಾಯವನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವುದು ದೇಶಕ್ಕೆ ಗೊತ್ತಾಗಿದೆ ಎಂದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

1 hour ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

2 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

5 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago