ರಾಮನಗರ: ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾದ ಕಾರಣ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡರೆ, ಯುವತಿ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಕಾಯಿಸೊಪ್ಪಿನ ಬೀದಿಯಲ್ಲಿ ಬುಧವಾರ ನಡೆದಿದೆ.
ರಾಜಣ್ಣ ಪುತ್ರ ಯಶವಂತ್ (24) ಮೃತ ಯುವಕ. ಈತ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದನು. ಅದೇ ಬೀದಿಯ ಯುವತಿ ಮೋನಿಕಾ ಚಾಕು ಇರಿದುಕೊಂಡಿದ್ದು, ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲ ವರ್ಷಗಳಿಂದ ಯಶವಂತ್ ಮತ್ತು ಮೋನಿಕಾ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ಪೋಷಕರಿಗೆ ಗೊತ್ತಾದಾಗ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಯುವಕನ ಮನೆಯಲ್ಲಿ ಮಾತಿನ ಚಕಮಕಿ ನಡೆದಿದೆ. ಇದರಿಂದ ಮನನೊಂದ ಯಶವಂತ್ ಮನೆಯಲ್ಲಿಯೇ ತನ್ನ ಕೊಠಡಿಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾನೆ.
ಬಾಗಿಲು ಮುರಿದು ಆತನನ್ನು ಕೆಳಕ್ಕಿಳಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಕೊನೆಯುಸಿರೆಳೆದಿದ್ದನು. ಶವವನ್ನು ಜಿಲ್ಲಾಸ್ಪತ್ರೆ ಶವಗಾರಕ್ಕೆ ಸಾಗಿಸಲಾಗಿದೆ.
ಆತ್ಮಹತ್ಯೆ ವಿಷಯ ತಿಳಿಯುತ್ತಿದ್ದಂತೆ ಮನೆಯಲ್ಲಿದ್ದ ಮೋನಿಕಾ ಚಾಕುವಿನಿಂದ ಹೊಟ್ಟೆಗೆ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಕುಟುಂಬದವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…