ಒಡಿಶಾ: ಪ್ರೀತಿಸಿದಾಕೆಯನ್ನು ವಿವಾಹವಾಗಲು ಇಷ್ಟವಿಲ್ಲದ್ದಕ್ಕೆ ಆಕೆಯನ್ನು ಪ್ರೇಮಿಯೊಬ್ಬ 49 ಬಾರಿ ಇರಿದು ಹತ್ಯೆ ಮಾಡಿದ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ.
ಜಗನ್ನಾಥ ಗೋಡಾ ಹತ್ಯೆ ಆರೋಪಿ. ಕುಣಿದಾರ್ ಸೀಮಾದಾಸ್ ಕೊಲೆಯಾದಾಕೆ. ಜಗನ್ನಾಥ ಮತ್ತು ಸೀಮಾದಾಸ್ ಪ್ರೀತಿಸುತ್ತಿದ್ದರು. ಆದರೆ ಆಕೆಯನ್ನು ವಿವಾಹವಾಗಲು ಆತನಿಗೆ ಇಚ್ಚೆ ಇರಲಿಲ್ಲ..ಈ ಕಾರಣಕ್ಕಾಗಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆಗೈಯಲು ಈತ ಮೊದಲೇ ಯೋಜನೆ ರೂಪಿಸಿ ಗುಜರಾತ್ ಗೆ ಯುವತಿಯನ್ನು ಕರೆದೊಯ್ದಿದ್ದ. ಬಳಿಕ ಸ್ಥಳವೊಂದರಲ್ಲಿ ಆಕೆಗೆ 49 ಬಾರಿ ಮನಬಂದಂತೆ ಇರಿದಿದ್ದು, ಬಳಿಕ ನಿರ್ಜನ ಪ್ರದೇಶದ ಗದ್ದೆಯಲ್ಲಿ ಮೃತದೇಹವನ್ನು ಇರಿದು ಹೋಗಿದ್ದಾನೆ.
ಯುವತಿ ಕೊಲೆಯಾಗಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಮೃತದೇಹದಲ್ಲಿದ್ದ ಟಿ ಶರ್ಟ್ ಆಧರಿಸಿ ಆರೋಪಿಯನ್ನು ಹುಡುಕಾಡಿ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾದರು.
ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ವಿವರಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…