ಪ್ರೀತಿಸಿದ ಯುವಕ ಬೇರೊಬ್ಬಳ ಜೊತೆ ಮದುವೆ  ; ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು  – Vishwanews24

Featured, ರಾಜ್ಯ ನ್ಯೂಸ್

ಪ್ರೀತಿಸಿದ ಯುವಕ ಬೇರೊಬ್ಬಳ ಜೊತೆ ಮದುವೆ  ; ಪ್ರಿಯಕರನ ಮದುವೆ ದಿನದಂದೇ ಯುವತಿ ನೇಣಿಗೆ ಶರಣು  – Vishwanews24

ಮಂಟಪದಿಂದ ಯುವಕ ಪರಾರಿ..

ಶಿವಮೊಗ್ಗ: ಉಪನ್ಯಾಸಕರಾಗಿರುವ ರೂಪಾ ಹಾಗೂ ಮುರಳಿ ಕಳೆದ ನಾಲೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಪ್ರೀತಿಸಿದ ಯುವಕ ಬೇರೊಬ್ಬಳನ್ನು ಮದುವೆಯಾಗಿದ್ದು ಈ ವಿಷಯ ರೂಪಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಪ್ರೀತಿಸಿದ ಯುವಕ ಬೇರೆಯವರನ್ನು ಮದುವೆಯಾಗಿರುವುದಕ್ಕೆ ಮನನೊಂದ ಯುವತಿ ಪ್ರಿಯಕರನ ಮದುವೆ ದಿನದಂದೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶಿವಮೊಗ್ಗದವರೇ ಆಗಿದ್ದ ರೂಪಾ ಹಾಗೂ ಮುರಳಿ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಜಾತಿಯಲ್ಲಿ ಇಬ್ಬರು ಬೇರೆಯಾದರೂ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರು.

ಹಿಂದೆಯೇ ರೂಪಾಳಿಗೆ ಮದುವೆ ಮಾಡಲು ಪೋಷಕರು ಗಂಡು ಹುಡುಕಲು ಪ್ರಾರಂಭಿಸಿದ್ದರು. ಆದರೆ ರೂಪ ಯಾವುದನ್ನೂ ಒಪ್ಪಿಕೊಂಡಿರಲಿಲ್ಲ. ಪಿಎಚ್‍ಡಿ ಮುಗಿದ ಬಳಿಕ ಪ್ರೀತಿಯ ವಿಷಯವನ್ನು ಮನೆಯವರಿಗೆ ತಿಳಿಸಿ, ಮದುವೆಯಾಗೋಣವೆಂದು ಮುಂದೂಡುತ್ತಾ ಬಂದಿದ್ದರು.

ಆದರೆ ತನ್ನ ಪ್ರೇಮಿ ಬೇರೆಯೊಬ್ಬಳನ್ನು ಮದುವೆಯಾಗಿದ್ದಾಳೆ ಎಂಬ ವಿಷಯ ತಿಳಿದ ರೂಪಾ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ.

ಇನ್ನು ರೂಪ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪಲ್ಲವಿಗೆ ತಾಳಿ ಕಟ್ಟುತ್ತಿದ್ದಂತೆ ಮುರಳಿ ಕಲ್ಯಾಣ ಮಂಟಪದಿಂದಲೇ ಪರಾರಿಯಾಗಿದ್ದು, ಈ ವಿಚಾರ ತಿಳಿದ ವಧು ಮದುವೆ ಮಂಟಪದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯ ಪೋಷಕರು ಆಕೆಯನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುರಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

BREAKING – ಕಾಪು ಫಕೀರ್ನಕಟ್ಟೆ ಗುಜರಿ ಅಂಗಡಿಯಲ್ಲಿ ಸ್ಫೋಟಗೊಂಡ ಗ್ಯಾಸ್ ಸಿಲಿಂಡರ್ ; ಇಬ್ಬರ ದುರ್ಮರಣ ಓರ್ವ ಗಂಭೀರ – VIshwanews24

Leave a Reply