ಶಿವಮೊಗ್ಗ: ಉಪನ್ಯಾಸಕರಾಗಿರುವ ರೂಪಾ ಹಾಗೂ ಮುರಳಿ ಕಳೆದ ನಾಲೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಪ್ರೀತಿಸಿದ ಯುವಕ ಬೇರೊಬ್ಬಳನ್ನು ಮದುವೆಯಾಗಿದ್ದು ಈ ವಿಷಯ ರೂಪಾ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಪ್ರೀತಿಸಿದ ಯುವಕ ಬೇರೆಯವರನ್ನು ಮದುವೆಯಾಗಿರುವುದಕ್ಕೆ ಮನನೊಂದ ಯುವತಿ ಪ್ರಿಯಕರನ ಮದುವೆ ದಿನದಂದೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಶಿವಮೊಗ್ಗದವರೇ ಆಗಿದ್ದ ರೂಪಾ ಹಾಗೂ ಮುರಳಿ ಕಳೆದ ನಾಲ್ಕೈದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಜಾತಿಯಲ್ಲಿ ಇಬ್ಬರು ಬೇರೆಯಾದರೂ ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದರು.
ಹಿಂದೆಯೇ ರೂಪಾಳಿಗೆ ಮದುವೆ ಮಾಡಲು ಪೋಷಕರು ಗಂಡು ಹುಡುಕಲು ಪ್ರಾರಂಭಿಸಿದ್ದರು. ಆದರೆ ರೂಪ ಯಾವುದನ್ನೂ ಒಪ್ಪಿಕೊಂಡಿರಲಿಲ್ಲ. ಪಿಎಚ್‍ಡಿ ಮುಗಿದ ಬಳಿಕ ಪ್ರೀತಿಯ ವಿಷಯವನ್ನು ಮನೆಯವರಿಗೆ ತಿಳಿಸಿ, ಮದುವೆಯಾಗೋಣವೆಂದು ಮುಂದೂಡುತ್ತಾ ಬಂದಿದ್ದರು.
ಆದರೆ ತನ್ನ ಪ್ರೇಮಿ ಬೇರೆಯೊಬ್ಬಳನ್ನು ಮದುವೆಯಾಗಿದ್ದಾಳೆ ಎಂಬ ವಿಷಯ ತಿಳಿದ ರೂಪಾ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ.
ಇನ್ನು ರೂಪ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆ ಪಲ್ಲವಿಗೆ ತಾಳಿ ಕಟ್ಟುತ್ತಿದ್ದಂತೆ ಮುರಳಿ ಕಲ್ಯಾಣ ಮಂಟಪದಿಂದಲೇ ಪರಾರಿಯಾಗಿದ್ದು, ಈ ವಿಚಾರ ತಿಳಿದ ವಧು ಮದುವೆ ಮಂಟಪದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯ ಪೋಷಕರು ಆಕೆಯನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುರಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…