ಹಲವು ವರ್ಷಗಳಿಂದ ಪ್ರೀತಿಸಿ ಇದೀಗ ಮದುವೆಯಾಗಲು ನಿರಾಕರಿಸಿ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆಂದು ಆರೋಪಿಸಿ ಮುಂಬೈ ಮೂಲದ ನಟಿಯೊಬ್ಬರು ಸ್ಯಾಂಡಲ್ ವುಡ್ ನಟನ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಸ್ಯಾಂಡಲ್‍ವುಡ್ ನಟ ಕಿರಣ್ ರಾಜ್‍ನನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಮುಂಬೈ ಮೂಲದ ಮಾಡಲ್ ಹಾಗೂ ನಟಿಯೊಬ್ಬರನ್ನು ಸ್ಯಾಂಡಲ್ ವುಡ್ ನಟ ಕಿರಣ್‍ರಾಜ್ ಪ್ರೀತಿಸುತ್ತಿದ್ದು , ಇವರಿಬ್ಬರೂ ಕಳೆದ ಐದು ವರ್ಷದಿಂದ ರಾಜರಾಜೇಶ್ವರನಗರ ವ್ಯಾಪ್ತಿಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಮದುವೆಯಾಗೋಣವೆಂದು ಕಿರಣ್‍ರಾಜ್ ಜೊತೆ ಮಾತುಕತೆ ನಡೆಸಿದಾಗ ಮದುವೆಗೆ ನಿರಾಕರಿಸಿ ಜಗಳವಾಡಿದ್ದು , ಮಾರ್ಚ್ 24ರಂದು ಇದೇ ವಿಚಾರವಾಗಿ ಗಲಾಟೆಯಾದಾಗ ನನ್ನ ಮೇಲೆ ಕಿರಣ್ ಹಲ್ಲೆ ನಡೆಸಿರುವುದಲ್ಲದೆ ತನಗೆ ವಂಚಿಸಿದ್ದಾರೆಂದು ರಾಜರಾಜೇಶ್ವರಿನಗರ ಠಾಣೆಗೆ ನಟಿ ದೂರು ನೀಡಿದ್ದಾರೆ. ವಂಚನೆ, ಹಲ್ಲೆ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಟ ಕಿರಣ್‍ರಾಜ್‍ನನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…