Featured

ಪ್ರೀತಿಸಿ ಮದುವೆಯಾದ ಹೆಂಡತಿಯನ್ನು ಕೊಲೆ ಮಾಡಿ ಗಂಡ ಪರಾರಿ – vishwanews24

ಲಾಡ್ಜ್‌ನಲ್ಲಿ ಹೆಂಡತಿಯನ್ನು ಕೊಲೆ ಮಾಡಿ ಗಂಡ ಪರಾರಿ

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಲಾಡ್ಜ್‌ನಲ್ಲಿ ನಡೆದಿದೆ.

ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ವಿದ್ಯಾ (23) ಮೃತ ಮಹಿಳೆ. ಆಕೆಯ ಪತಿ ಆನಂದ್ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಐಡಿ ಕಾರ್ಡ್‌ನ ಟ್ಯಾಗ್‌ನಿಂದ ಕತ್ತು ಬಿಗಿದು ಉಸಿರುಗಟ್ಟಿಸಿ ವಿದ್ಯಾಳನ್ನು ಕೊಲೆ ಮಾಡಲಾಗಿದೆ. ಬಳಿಕ ಆಕೆಯ ಮೊಬೈಲ್ ತೆಗೆದುಕೊಂಡು ಆನಂದ್ ಲಾಡ್ಜ್‌ನಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ವಿದ್ಯಾ ಹಾಗೂ ಆನಂದ್ ಸುಮಾರು ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಒಂದು ಗಂಡು ಮಗುವಿದೆ. ದಂಪತಿ ದೊಡ್ಡಬಳ್ಳಾಪುರ ನಗರದ ಗಾಂಧಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ಆರು ತಿಂಗಳಿಂದ ದಂಪತಿ ನಡುವೆ ಕೌಟುಂಬಿಕ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾ ಸುಮಾರು ಎರಡು ತಿಂಗಳ ಹಿಂದೆ ಗಂಡನಿಂದ ದೂರವಾಗಿ ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದರು.

ಇತ್ತ ಪತ್ನಿ ಕಾಣೆಯಾಗಿರುವ ಬಗ್ಗೆ ಆನಂದ್ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದ ಎನ್ನಲಾಗಿದೆ. ಸುಮಾರು 20 ದಿನಗಳ ಹಿಂದೆ ವಿದ್ಯಾಳನ್ನು ಪೊಲೀಸರು ಕರೆಸಿ ಇಬ್ಬರಿಗೂ ಬುದ್ಧಿವಾದ ಹೇಳಿ ಮತ್ತೆ ಗಂಡನ ಜೊತೆ ಕಳುಹಿಸಿದ್ದರು. ಆದರೆ ಬುಧವಾರ ಅದೇನಾಯ್ತೋ ಏನೋ ವಿದ್ಯಾಳನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಆನಂದ್, ಅಲ್ಲಿಯೇ ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆನಂದ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Vishwa News 24

Recent Posts

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸೆ.17ರಿಂದ ವಾಹನ ಸಂಚಾರದಲ್ಲಿ ಬದಲಾವಣೆ – vishwanews24

 ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ಸೆ.17ರಿಂದ ವಾಹನ ಸಂಚಾರದಲ್ಲಿ ಬದಲಾವಣೆ  ಸಾರ್ವಜನಿಕರು ಬದಲಿ ಮಾರ್ಗ ಬಳಸಲು ಮಂಗಳೂರು ನಗರ ಪೊಲೀಸ್…

2 minutes ago

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ ‘ದಾದಾ ಸಾಹೇಬ್ ಫಾಲ್ಕೆ’ ಪ್ರಶಸ್ತಿ – vishwanews24

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ .. ಸೆಪ್ಟೆಂಬರ್ 22 ರಂದು ಪ್ರಶಸ್ತಿ…

15 minutes ago

ಪ್ರಧಾನಿ ಮೋದಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ – vishwanews24

76ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿ: ರಾಜಕೀಯ ನಾಯಕರಿಂದ ಶುಭಾಶಯ ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ 76ನೇ…

23 minutes ago

ಉಡುಪಿ: 10 ತಿಂಗಳ ಹಿಂದೆ ನಡೆದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ; ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; 10 ತಿಂಗಳ ಬಳಿಕ ಆರೋಪಿ ಬಂಧನ ಉಡುಪಿ: 10 ತಿಂಗಳ ಹಿಂದೆ ನಡೆದ ಮಣಿಪಾಲದ ವಿದ್ಯಾರ್ಥಿನಿ…

29 minutes ago

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ – vishwanews24

ಪ್ರಧಾನಿ ಮೋದಿ, ಅಮಿತ್ ಶಾ ಅವರಿಗೂ ‘ವಂದೇ ಮಾತರಂ’ ಪೂರ್ತಿಯಾಗಿ ಹಾಡಲು ಬರುವುದಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ…

20 hours ago

ತುಳು ಭಾಷೆಗೆ ಈ ಬಾರಿ ಮಾನ್ಯತೆ ಸಿಗುವುದು ಖಂಡಿತ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ – vishwanews24

ತುಳುವಿಗೆ ಶಾಸ್ತ್ರೀಯ ಸ್ಥಾನಮಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ : ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉಡುಪಿ : ಮಂಗಳೂರಿನಲ್ಲಿ…

20 hours ago