Featured

ಪ್ರೀತಿ ನಿರಾಕರಣೆ : ಒಮನ್ ನಲ್ಲಿ ಆತ್ಮಹತ್ಯೆಗೆ ಶರಣಾದ ಉಳ್ಳಾಲದ ಯುವಕ  – vishwanews24

ಒಮನ್ : ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಉಳ್ಳಾಲದ ಯುವಕ

ಉಳ್ಳಾಲ: ಒಮನ್ ನಲ್ಲಿ ಉದ್ಯೋಗದಲ್ಲಿದ್ದ ಉಳ್ಳಾಲದ ಸೋಮೇಶ್ವರ ಮೂಲದ ಯುವಕನೋರ್ವ ತನ್ನ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ
ಘಟನೆಯೊಂದು ಬೆಳಕಿಗೆ ಬಂದಿದೆ.

ಉಳ್ಳಾಲದ ಸೋಮೇಶ್ವರ ನಿವಾಸಿಗಳಾದ ಚಂದ್ರ ಮತ್ತು ದೀಪಾ ದಂಪತಿಯ ಹಿರಿಯ ಪುತ್ರ ಪುನೀತ್ ಪೂಜಾರಿ (32) ಮೃತಪಟ್ಟ ದುರ್ದೈವಿ.
ಪುನೀತ್ ಕಳೆದ ಒಂದೂವರೆ ವರ್ಷಗಳಿಂದ ಒಮಾನ್‌ನ ಲಿಫ್ಟ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ಇತ್ತೀಚಿಗೆ ಒಂದೂವರೆ ತಿಂಗಳ ಹಿಂದಷ್ಟೇ ಊರಿಗೆ ಬಂದು ಮರಳಿದ್ದರು. ಇದೀಗ ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ 👇:

ಪುನೀತ್ ಮಂಗಳೂರಿನ ಉರ್ವಾ ಮೂಲದ ಯುವತಿಯನ್ನು ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು.ಎನ್ನಲಾಗಿದ್ದು ಇತ್ತೀಚಿನ ದಿನಗಳಲ್ಲಿ ಯುವತಿಯು ಪುನೀತ್ ಅವರ ಕರೆ ಹಾಗೂ ಸಂದೇಶಗಳಿಗೆ ಸ್ಪಂದಿಸದೆ ಪ್ರೀತಿಯನ್ನು ನಿರಾಕರಿಸಿದ್ದರು ಎನ್ನಲಾಗಿದೆ.

ಲೈವ್ ವಿಡಿಯೋ: ಪ್ರೀತಿ ನಿರಾಕರಣೆಯಿಂದ ಮನನೊಂದಿದ್ದ ಪುನೀತ್ ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿ, ತನ್ನ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತದೇಹ ತರಲು ವಿಳಂಬ ಸಾಧ್ಯತೆ:
ಮಧ್ಯಪ್ರಾಚ್ಯದಲ್ಲಿ ಸದ್ಯ ಇರುವ ಅಶಾಂತ ಪರಿಸ್ಥಿತಿಯಿಂದಾಗಿ ಒಮಾನ್‌ನ ಕಾನೂನು ಪ್ರಕ್ರಿಯೆಗಳಿಗೆ ಹೆಚ್ಚಿನ ಸಮಯ ತಗುಲುವ ಸಾಧ್ಯತೆಯಿದ್ದು, ಈ ಕಾರಣದಿಂದ ಮೃತದೇಹವನ್ನು ಭಾರತಕ್ಕೆ ತರಲು ವಿಳಂಬವಾಗಬಹುದು ಎಂದು ಕುಟುಂಬಸ್ಥರು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ 👇:

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

18 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

22 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

22 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

22 hours ago