ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಪಾತ್ರರಾದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ -Vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ನೀಡುವ ವಾರ್ಷಿಕ ಪ್ರಶಸ್ತಿಯಾದ “ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ” ಪ್ರಶಸ್ತಿಗೆ ಈ ಬಾರಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪಾತ್ರರಾಗಿದ್ದಾರೆ.

ಯುಗದ ಸಾಧಕ ಪ್ರಶಸ್ತಿಗೆ ಹಿರಿಯ ಸಾಹಿತಿ, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಆಯ್ಕೆಯಾಗಿದ್ದಾರೆ.

ಪ್ರೆಸ್‌ಕ್ಲಬ್‌ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಎಂ.ಸಿದ್ಧರಾಜು, ಕೆ.ಸುನಿಲ್‌ ಕುಮಾರ್‌, ಎಚ್‌.ಕೆ.ಸಾವಿತ್ರಿ, ಬಿ.ವಿ.ನಾಗರಾಜು, ರವೀಂದ್ರ ಜಿ.ಭಟ್ಟ, ಕೆ.ಎನ್‌.ಚೆನ್ನೇಗೌಡ, ಬಿ.ಹರಿಶ್ಚಂದ್ರ ಭಟ್‌, ಎಂ.ಅಬ್ದುಲ್ ಹಮೀದ್ (ಪಾಳ್ಯ), ಇಮ್ರಾನ್‌ ಖುರೇಶಿ, ಜಿ.ಕೆ.ಸತ್ಯ, ಲಕ್ಷ್ಮಣ ಕೊಡಸೆ, ಜೋಸೆಫ್‌ ಹೂವರ್‌, ಎನ್‌.ಎಸ್‌.ಶಂಕರ್‌, ಬಿ.ಕೆ.ರವಿ, ರು.ಬಸಪ್ಪ, ಜಯಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಡಿಸೆಂಬರ್ ೩೧ರಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿದ್ದು ಪ್ರಶಸ್ತಿ ಪುರಸ್ಕೃತರಿಗೆ ಬಹುಮಾನ ವಿತರಿಸಲಿದ್ದಾರೆ. ಡಿಸಿಎಂ ಗಳಾದ ಡಾ. ಸಿ.ಎನ್. ಅಶ್ವಥ್ ನಾರಾಯಣ, ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.