ಬೆಂಗಳೂರು: ಬೆಂಗಳೂರು ಪ್ರೆಸ್ ಕ್ಲಬ್ ನೀಡುವ ವಾರ್ಷಿಕ ಪ್ರಶಸ್ತಿಯಾದ “ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ” ಪ್ರಶಸ್ತಿಗೆ ಈ ಬಾರಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಪಾತ್ರರಾಗಿದ್ದಾರೆ.
ಯುಗದ ಸಾಧಕ ಪ್ರಶಸ್ತಿಗೆ ಹಿರಿಯ ಸಾಹಿತಿ, ನಿಘಂಟು ತಜ್ಞ ಪ್ರೊ.ಜಿ.ವೆಂಕಟಸುಬ್ಬಯ್ಯ ಆಯ್ಕೆಯಾಗಿದ್ದಾರೆ.
ಪ್ರೆಸ್‌ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಎಂ.ಸಿದ್ಧರಾಜು, ಕೆ.ಸುನಿಲ್ ಕುಮಾರ್, ಎಚ್.ಕೆ.ಸಾವಿತ್ರಿ, ಬಿ.ವಿ.ನಾಗರಾಜು, ರವೀಂದ್ರ ಜಿ.ಭಟ್ಟ, ಕೆ.ಎನ್.ಚೆನ್ನೇಗೌಡ, ಬಿ.ಹರಿಶ್ಚಂದ್ರ ಭಟ್, ಎಂ.ಅಬ್ದುಲ್ ಹಮೀದ್ (ಪಾಳ್ಯ), ಇಮ್ರಾನ್ ಖುರೇಶಿ, ಜಿ.ಕೆ.ಸತ್ಯ, ಲಕ್ಷ್ಮಣ ಕೊಡಸೆ, ಜೋಸೆಫ್ ಹೂವರ್, ಎನ್.ಎಸ್.ಶಂಕರ್, ಬಿ.ಕೆ.ರವಿ, ರು.ಬಸಪ್ಪ, ಜಯಪ್ರಕಾಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಡಿಸೆಂಬರ್ ೩೧ರಂದು ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಲಿದ್ದು ಪ್ರಶಸ್ತಿ ಪುರಸ್ಕೃತರಿಗೆ ಬಹುಮಾನ ವಿತರಿಸಲಿದ್ದಾರೆ. ಡಿಸಿಎಂ ಗಳಾದ ಡಾ. ಸಿ.ಎನ್. ಅಶ್ವಥ್ ನಾರಾಯಣ, ಲಕ್ಷ್ಮಣ ಸವದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…