ಪತ್ತನಂತಿಟ್ಟ: ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ 31 ವರ್ಷದ ವ್ಯಕ್ತಿ ಹಾಗೂ ಆತನ ಪ್ರೇಯಸಿ ಒಟ್ಟಿಗೆ ಸಾಯಲು ನಿರ್ಧರಿಸಿದ್ದು, ದುರಾದೃಷ್ಟವೆಂಬಂತೆ ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿನ ಭಯದಿಂದ ಹಿಂದೆ ಸರಿದ ಪ್ರೇಯಸಿ ಕೊನೆ ಕ್ಷಣದಲ್ಲಿ ತನ್ನ ಪ್ರಾಣ ಉಳಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಈ ಇಬ್ಬರು ಪ್ರೇಮಿಗಳು ಒಟ್ಟಿಗೆ ಸಾಯಲು ನಿರ್ಧರಿಸಿ ಹೋಟೆಲೊಂದರಲ್ಲಿ ರೂಮ್ ಬುಕ್ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಒಂದಷ್ಟು ಔಷಧಿಯನ್ನೂ ಸೇವಿಸಿ ಸಾಯಲು ಮುಂದಾಗಿದ್ದಾರೆ. ನೇಣಿಗೆ ಕೊರಳೊಡ್ಡಿದ ವ್ಯಕ್ತಿ ಸಾವನ್ನಪ್ಪಿದ್ದು, ಸಾವಿಗೆ ಹೆದರಿ ಹಿಂದೆ ಸರಿದ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಸೋಮವಾರ ರಾತ್ರಿ ಹೋಟೆಲ್ ರೂಮ್‌ನಿಂದ ಯುವತಿ ಅಳುವ ಸದ್ದು ಕೇಳಿ ಅಲ್ಲಿನ ಸಿಬ್ಬಂದಿಗಳು ರೂಮ್ ಬಾಗಿಲು ತೆಗೆದು ನೋಡಿದಾಗ ವ್ಯಕ್ತಿಯ ಮೃತದೇಹ ನೇತಾಡುತ್ತಿರುವುದು ಕಂಡುಬಂದಿದೆ. ಇನ್ನೂ, ಯುವತಿಯ ಕಿವಿಯಿಂದ ರಕ್ತ ಸೋರುತ್ತಿರುವುದನ್ನು ನೋಡಿದ ಸಿಬ್ಬಂದಿಗಳು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ಮುಂದುವರೆಸಿದ್ದು, ವಿಚಾರಣೆ ವೇಳೆ ಯುವತಿ ನಡೆದ ವಿಚಾರವನ್ನು ತಿಳಿಸಿದ್ದಾಳೆ. ತಿರುವನಂತಪುರಂ ನಿವಾಸಿಯಾಗಿರುವ ಯುವತಿ ತಾನು ಮತ್ತು ತನ್ನ ಪ್ರೇಮಿ ಒಟ್ಟಿಗೆ ಸಾಯಲು ನಿರ್ಧರಿಸಿದ್ದೆವು. ಹೀಗಾಗಿ ಹೋಟೆಲ್ ರೂಮ್ ಬುಕ್ ಮಾಡಿಕೊಂಡಿದ್ದೆವು ಎಂದು ತಿಳಿಸಿದ್ದು, ಭಾನುವಾರ ಈ ಜೋಡಿಗಳು ಹೋಟೆಲ್‌ಗೆ ಬಂದಿದ್ದಾರೆ.
ಯುವತಿ ಭಾನುವಾರ ಮನೆಗೆ ಬಾರದ ಹಿನ್ನೆಲೆಯಲ್ಲಿ ಅವಳ ಕುಟುಂಬದವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…