ದಾವಣಗೆರೆ: ಪ್ರೇಮಿಗಳ ದಿನವೇ ದಾವಣಗೆರೆ ಜಿಲ್ಲೆಯ ಇಬ್ಬರು ಐಎಎಸ್ ಅಧಿಕಾರಿಗಳು ಹಸೆಮಣೆ ಏರಿದ್ದಾರೆ. ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಒ ಎಸ್ ಅಶ್ವತಿ ಹಾಗೂ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಪ್ರೇಮ ವಿವಾಹವಾಗಿದ್ದಾರೆ.
ಪ್ರೇಮಿಗಳ ದಿನದಂದೇ ಖಡಕ್ ಐಪಿಎಸ್ ಅಧಿಕಾರಿಗಳು ಸಪ್ತಪದಿ ತುಳಿಯುತ್ತಿದ್ದು, ಕೇರಳದ ಕೋಯಿಕ್ಕೋಡ್‌ನಲ್ಲಿ ಮದುವೆ ಸಮಾರಂಭ ನಡೆಯಲಿದೆ. ದಾವಣಗೆರೆ ಡಿಸಿ ಡಾ.ಬಗಾದಿ ಗೌತಮ್ ಮೂಲತಃ ಆಂಧ್ರ ಪ್ರದೇಶದ ವಿಶಾಖಪಟ್ಟಣಂದವರು ಹಾಗೂ ಎಸ್. ಅಶ್ವತಿ ಕೇರಳದವರು. ಕೇವಲ ಅರ್ಧ ಗಂಟೆಯಲ್ಲಿ ಸರಳ ವಿವಾಹ ಮುಗಿದಿದ್ದು ಹೊಸ ಜೀವನಕ್ಕೆ ಅಧಿಕಾರಿಗಳು ಕಾಲಿಟ್ಟಿದ್ದಾರೆ.
ನಾಲ್ಕು ತಿಂಗಳ ಹಿಂದೆ ರಾಯಚೂರಿನಿಂದ ದಾವಣಗೆರೆಗೆ ಬಂದ ಜಿಲ್ಲಾಧಿಕಾರಿ ಬಗಾದಿ ಗೌತಮ್ ಮತ್ತು ಸಿಇಒ ಅಶ್ವತಿ ಕೆಲ ಸಭೆ ಸಮಾರಂಭಗಳಲ್ಲಿ ಭಾಗವಹಿಸಿದ್ದರೂ ತಮ್ಮ ಪ್ರೇಮದ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ. ಆದರೆ ತಾವಿಬ್ಬರೂ ಮದುವೆಯಾಗುತ್ತಿರುವುದಾಗಿ ಫೆ.1ರಂದು ಹೇಳಿ ಮದುವೆಯ ಆಮಂತ್ರಣ ಪತ್ರಿಕೆ ನೀಡಿದಾಗ ಪ್ರತಿಯೊಬ್ಬರು ತಬ್ಬಿಬ್ಬಾದರು. ಆ ಸಮಯದಲ್ಲಿ ಅವರು ತಮ್ಮಿಬ್ಬರ ನಡುವಿನ ಹಳೆಯ ಗೆಳೆತನ, ಪ್ರೀತಿಯ ಗುಟ್ಟು ರಟ್ಟು ಮಾಡಿದ್ದರು.
ಇದೇ 17ರಂದು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಆರತಕ್ಷತೆ ಸಮಾರಂಭ ನಡೆಯಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…