Featured

ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಪ್ರಿಯಕರ – vishwanews24

ಪ್ರೇಯಸಿಯ ಕತ್ತು ಸೀಳಿ ಕೊಂದು ಆತ್ಮಹತ್ಯೆಗೆ ಶರಣಾದ ಪ್ರಿಯಕರ

ಬೆಳಗಾವಿ: ಮದುವೆಗೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ  ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ.

ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ (29) ಪ್ರೇಯಸಿ ಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪೇಂಟಿಂಗ್ ಕೆಲಸ ಮಾಡ್ತಿದ್ದ ಪ್ರಶಾಂತ್ ಒಂದೂವರೆ ವರ್ಷದಿಂದ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಪ್ರಶಾಂತ್ ಯುವತಿಯನ್ನು ಮದುವೆಯಾಗುವಂತೆ ಒತ್ತಾಯಿಸಿದ್ದ. ಈ ವೇಳೆ ಯುವತಿಯ ತಾಯಿ, ಚೆನ್ನಾಗಿ ಕೆಲಸ ಮಾಡಿ, ಸಂಬಳ ಜಾಸ್ತಿ ತೆಗೆದುಕೋ ಎಂದು ಬುದ್ಧಿವಾದ ಹೇಳಿದ್ದರು.

ಪ್ರಶಾಂತ್ ತನ್ನ ಪ್ರೇಯಸಿಯನ್ನು ಆಕೆಯ ಚಿಕ್ಕಮ್ಮನ ಮನೆಗೆ ಕರೆಸಿಕೊಂಡಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆಕೆಗೆ ವಿಷ ಕುಡಿಸಲು ಯತ್ನಿಸಿದ್ದ. ಬಳಿಕ ಚಾಕುವಿನಿಂದ ಆಕೆಯ ಕತ್ತು ಸೀಳಿ, ಅದೇ ಚಾಕುವಿನಿಂದ ಆತನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸಿಪಿಐ ಎಸ್.ಎಸ್.ಸಿಮಾನಿ, ಎಸಿಪಿ ಸಂತೋಷ ಸತ್ಯನಾಯಕರಿಂದ ಮಾಹಿತಿ ಪಡೆದರು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಬಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಬಳಿಕ ಮನೆಯವರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ – vishwanews24

ನೂತನ ಸಚಿವ ಸಂಪುಟದಲ್ಲಿ ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್…

10 hours ago

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ – vishwanews24

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ : ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ ಹಸ್ತಾಂತರ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು…

11 hours ago

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

12 hours ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

13 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

14 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

14 hours ago