ಧಾರವಾಡ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರ ಸಹ ನೇಣಿಗೆ ಶರಣಾದ ಘಟನೆ ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಕೋಟಬಾಗಿ ಗ್ರಾಮದ ತರುಣ್ ಸಾಗರ್ ಕುರಕುರಿ (21) ಆತ್ಮಹತ್ಯೆಗೆ ಶರಣಾದ ಯುವಕ. ಈತ ನಗರದ ವಾಚ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಆ.12 ರಂದು ಈತನ ಪ್ರೇಯಸಿ ಮೇಘಾ ಗುಬ್ಬನ್ನವರ್ (20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಳು.
ಮನೆಯಲ್ಲಿ ಹೆಚ್ಚು ಮೊಬೈಲ್ ಬಳಸುತ್ತಿದ್ದೀಯ ಎಂದು ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ಈಕೆಯ ಆತ್ಮಹತ್ಯೆ ಸುದ್ದಿ ಕೇಳಿ ಸ್ನೇಹಿತನ ರೂಮ್‌ನಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ತರುಣ್, ಗೆಳೆಯನ ರೂಮ್‌ನಲ್ಲಿ ಬಂದು ತಂಗಿದ್ದ. ಕಳೆದ ರಾತ್ರಿ ಗೆಳೆಯನ ಮುಂದೆ ಹುಡುಗಿ ಜೊತೆ ಜಗಳವಾಗಿದೆ, ಆಕೆಯ ಸಹೋದರನಿಗೆ ಈ ವಿಷಯ ಗೊತ್ತಾಗಿದೆ ಎಂದು ಹೇಳಿದ್ದ ಎನ್ನಲಾಗಿದೆ.
ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೇಘಾ ಹಾಗೂ ತರುಣ್ ಮಧ್ಯೆ ಪ್ರೇಮ ಕಹಾನಿ ಇತ್ತು ಎಂಬುದು ಇದೀಗ ಗೊತ್ತಾಗಿದೆ. ಈ ಬಗ್ಗೆ ತರಣ್ ಸಾಗರ್ ಪೋಷಕರಿಗೆ ಕೇಳಿದರೆ ಪ್ರೇಮದ ಬಗ್ಗೆ ಗೊತ್ತಿರಲಿಲ್ಲ. ಬೆಳಗ್ಗೆ ಫೋನ್ ಎತ್ತದೇ ಇದ್ದಾಗ ಹುಡುಕಾಟ ನಡೆಸಿದಾಗ, ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…