ಬೆಂಗಳೂರು: ಪ್ರ್ಯಾಂಕ್ ಮಾಡೋಕೆ ಜೀವಂತ ವ್ಯಕ್ತಿಯನ್ನು ಚೀಲದಲ್ಲಿ ತುಂಬಿಸಿ, ಮಂಗಳೂರಿಗೆ ಕೊರಿಯರ್ ಮೂಲಕ ಪಾರ್ಸೆಲ್ ಮಾಡಲು ಬಂದಿರುವ ಘಟನೆ ವೈಯಾಲಿಕಾವಲ್‌ನಲ್ಲಿ ನಡೆದಿದೆ.
ಸಂಜೆ 4:30ರ ಸುಮಾರಿಗೆ ಬಿಳಿಬಣ್ಣದ ಮೂಟೆಯೊಂದಿಗೆ ನಾಲ್ವರು ವೈಯಾಲಿಕಾವಲ್‌ನಲ್ಲಿರುವ ಕೊರಿಯರ್ ಆಫೀಸ್‌ಗೆ ಬಂದಿದ್ದರು. ಇದನ್ನು ಮಂಗಳೂರಿಗೆ ಕಳುಹಿಸಬೇಕೆಂದು ಕೊರಿಯರ್ ಸಿಬ್ಬಂದಿಗೆ ಹೇಳಿದ್ದಾರೆ. ಮೂಟೆ ಅಲುಗಾಡ್ತಿರೋದು ನೋಡಿ ಕೊರಿಯರ್ ಕಚೇರಿಯಲ್ಲಿದ್ದ ಇಬ್ಬರು ಮಹಿಳಾ ಸಿಬ್ಬಂದಿ ಗಾಬರಿಯಾಗಿದ್ದಾರೆ. ಮೂಟೆಯನ್ನ ಓಪನ್ ಮಾಡಿದಾಗ ವೃದ್ದನೊಬ್ಬ ಮೂಟೆಯಿಂದ ಎದ್ದು ಹೊರನಡೆದಿದ್ದಾನೆ.
ಇದನ್ನೂ ಓದಿ:
ವೃದ್ಧ ಹೊರನಡೆಯುತ್ತಿದ್ದಂತೆ ಕೊರಿಯರ್ ಪಾರ್ಸೆಲ್ ಮಾಡಲು ಬಂದಿದ್ದ ಇಬ್ಬರು ಮಹಿಳೆಯರು, ಪುರುಷರು ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಮೂಟೆಯಲ್ಲಿದ್ದ ವ್ಯಕ್ತಿಗೆ ಮಾತನಾಡಲು ಕೂಡ ಬರುತ್ತಿರಲಿಲ್ಲ. ಈ ಬಗ್ಗೆ ಕೊರಿಯರ್ ಆಫೀಸ್‌ನ ಸಿಬ್ಬಂದಿ ಭಯಪಟ್ಟಿದ್ದು, ವೈಯಾಲಿಕಾವಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಐವರನ್ನು ಕರೆಸಿ ವಿಚಾರಣೆ ನಡೆಸಿದಾಗ ಒಂದೇ ಕುಟುಂಬದವರು ಸೇರಿಕೊಂಡು ಪ್ರ್ಯಾಂಕ್ ಮಾಡಿರುವುದು ಗೊತ್ತಾಗಿದೆ. ಯುಗಾದಿ ಮತ್ತು ರಂಜನ್ ಹಬ್ಬ ಒಟ್ಟಿಗೆ ಬಂದಿದೆ. ಹೀಗಾಗಿ ಬಸ್‌ನಲ್ಲಿ ಸೀಟ್ ಸಿಗಲ್ಲ ಅನ್ನೋ ಕಾರಣಕ್ಕೆ ವ್ಯಕ್ತಿಯನ್ನು ಪಾರ್ಸೆಲ್ ಮಾಡುವ ವಿಷಯ ಇಟ್ಟುಕೊಂಡು ವಿಡಿಯೋ ಮಾಡಲು ಈ ರೀತಿ ಮಾಡಿದ್ದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ. ಅದಕ್ಕೆ ಪೊಲೀಸರು ಈ ರೀತಿ ಒಬ್ಬ ವ್ಯಕ್ತಿಯನ್ನ ಚೀಲದಲ್ಲಿ ತರೋದು ತಪ್ಪು ಅನ್ನೋದು ಗೊತ್ತಿಲ್ವಾ? ನಿಮ್ಮ ಹುಡುಗಾಟಕ್ಕೆ ಚೀಲದಲ್ಲಿದ್ದ ವ್ಯಕ್ತಿ ಉಸಿರುಗಟ್ಟಿ ಸತ್ತಿದ್ರೆ, ಇಲ್ಲ ಆರೋಗ್ಯ ಸಮಸ್ಯೆ ಆಗಿದ್ರೇ ಯಾರು ಹೊಣೆ? ಒಂದು ವೇಳೆ ಕೊರಿಯರ್ ಕಚೇರಿಯ ಸಿಬ್ಬಂದಿಗೆ ಏನಾದರೂ ಆಗಿದ್ರೇ ಯಾರು ಹೊಣೆ? ರೀಲ್ಸ್‌ಗಾಗಿ ಈ ರೀತಿ ಹುಡುಕಾಟ ಮಾಡೋದು ಸರಿನಾ? ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ:
ಈ ಫ್ಯಾಮಿಲಿ `ಮಾಂಕ್ ಪ್ರಾಂಕ್’ ಎಂಬ ಅಕೌಂಟ್‌ನ್ನು ಹೊಂದಿದ್ದು, ಗಂಡ, ಹೆಂಡತಿ, ಅತ್ತೆ, ಮಾವ ಮತ್ತು ಮೈದುನ ಸೇರಿಕೊಂಡು ರೀಲ್ಸ್, ಪ್ರ್ಯಾಂಕ್ ಮಾಡುತ್ತಿರುತ್ತಾರೆ. ಈ ಬಗ್ಗೆ ಕುಟುಂಬಸ್ಥರು ಮಾತನಾಡಿ, ನಾವು ಬಸ್ ರಶ್ ವಿಚಾರದಲ್ಲಿ ಪ್ರ್ಯಾಂಕ್ ಮಾಡಲು ಹೋಗಿದ್ವಿ, ಅದು ಈ ರೀತಿ ತಪ್ಪಾಗುತ್ತೆ ಅಂತಾ ಗೊತ್ತಿರಲಿಲ್ಲ. ನಾವು ತಪ್ಪು ಮಾಡಿದ್ದೇವೆ, ಅದರಿಂದ ಹೀಗೆ ಕಷ್ಟ ಆಗುತ್ತೆ ಅಂತಾ ಗೊತ್ತಿರಲಿಲ್ಲ. ಪೊಲೀಸರು ಕರೆಸಿ ಬುದ್ಧಿ ಹೇಳಿದ್ರು, ಇನ್ಮುಂದೆ ಈ ರೀತಿ ನಾವು ಮಾಡಲ್ಲ. ಯಾರು ರೀತಿ ನೀವು ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…