Featured

ಪ್ಲಾಸ್ಟಿಕ್‌ ಮಹಾಮಾರಿ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ವಂದೇ ಮಾತರಂ’ ಹಾಡಿನ ಮೂಲಕ ವಿಶಿಷ್ಟ ಪ್ರಯತ್ನ -Vishwanews24

ಕುಂದಾಪುರ: ಪ್ಲಾಸ್ಟಿಕ್‌ ಮಹಾಮಾರಿ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶಿಷ್ಟ ಪ್ರಯತ್ನವೊಂದನ್ನು ಮಾಡಲಾಗಿದೆ. ವಂದೇ ಮಾತರಂ ಹಾಡನ್ನು ಬಳಸಿಕೊಂಡು ವೀಡಿಯೊ ಸಾಂಗ್‌ ತಯಾರಿಸಿದ್ದು ಮನಮಟ್ಟುವಂತೆ ಮೂಡಿಬಂದಿದೆ. ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ಟೀಮ್‌ ಹಾಗೂ ಲೈಫ್‌ಲೈಕ್‌ ಪ್ರೊಡಕ್ಷನ್‌ ಸಹಯೋಗದಲ್ಲಿ ಎರಡೂವರೆ ನಿಮಿಷಗಳ ಈ ವೀಡಿಯೋ ತಯಾರಿಸಲಾಗಿದೆ.

ಭೂದೇವಿ ಪ್ಲಾಸ್ಟಿಕ್‌ ಸುಳಿಯಲ್ಲಿ ಸಿಲುಕಿಕೊಂಡು ಒದ್ದಾಡುತ್ತಿರುವ ಕಥಾ ಹಂದರವನ್ನು ಇಟ್ಟುಕೊಂಡು ಹಾಡನ್ನು ಚಿತ್ರಕರಿಸಲಾಗಿದ್ದು, ಇದಕ್ಕೆ ವಂದೇ ಮಾತರಂ ಹಾಡನ್ನು ಬಳಸಿಕೊಳ್ಳಲಾಗಿದೆ. 3.4 ನಿಮಿಷ ಅವಧಿಯ ಈ ಹಾಡಿನಲ್ಲಿ ಭೂಮಿ ಕಾಯುವ ದೈವ ಮರೆಯಾದ‌ ಭೂಮಿಯ ಸೌಂದರ್ಯವನ್ನು ಹುಡುಕುತ್ತಾ ಪ್ಲಾಸ್ಟಿಕ್‌ ಎಂಬ ರಕ್ಕಸನೊಂದಿಗೆ ಹೋರಾಡುವ ಸನ್ನಿವೇಶವನ್ನು ಅದ್ಭುತವಾಗಿ ಕಟ್ಟಿಕೊಡಲಾಗಿದೆ.

ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್‌ನ ಡಾ. ರಶ್ಮಿ ಕುಂದಾಪುರ, ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್‌ ಎಂಬ ಸಮಾನ ಮನಸ್ಕರ ತಂಡವೊಂದು ಕಳೆದ 33 ವಾರಗಳಿಂದ ಕುಂದಾಪುರ ಕಡಲ ಕಿನಾರೆಯ ಸ್ವಚ್ಛತೆಯನ್ನು ಮಾಡಿ, ಪ್ಲಾಸ್ಟಿಕ್‌ ಬಗ್ಗೆ ಜನರಲ್ಲಿ ಅರಿವು ಮೂಡಿಸುತ್ತಿದೆ. ಮೂರು ಜನರಿಂದ ಆರಂಭಗೊಂಡ ಈ ತಂಡದಲ್ಲಿ ಈಗ 33 ಮಂದಿ ಇದ್ದಾರೆ. ಈಗಾಗಲೇ ಗೋಪಾಡಿ, ಕೋಡಿ, ಕುಂಬಾಡಿ, ಕೋಟೇಶ್ವರ, ಮಾಬುಕಲ ಹೀಗೆ ಕಡಲ ಕಿನಾರೆಯಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪ್ಲಾಸ್ಟಿಕ್‌ ಜನಜಾಗೃತಿಯನ್ನು ದೊಡ್ಡಮಟ್ಟದಲ್ಲಿ ಜನರಿಗೆ ತಲುಪಿಸುವ ಉದ್ದೇಶದಿಂದ ಈ ವಿಡಿಯೋ ಹಾಡನ್ನು ತಯಾರಿಸಲಾಗಿದೆ ಎಂದರು.

ಮೂರು ದಿನಗಳ ಹಿಂದೆ ಈ ಹಾಡನ್ನು ಯೂಟ್ಯೂಬ್‌ಗೆ ಅಪ್‌ಲೋಡ್‌ ಮಾಡಲಾಗಿದ್ದು, ಈವರೆಗೆ‌ 16 ಸಾವಿರ ಮಂದಿ ವಿಡಿಯೋವನ್ನು ವೀಕ್ಷಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಾಡಿಗೆ‌ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಕಲಾವಿದರಾಗಿ ಶ್ರುತಿ ಜೈನ್ ರೆಂಜಾಳ, ಸತ್ಯನಾರಾಯಣ‌ ಮಂಜ‌ ಭಾಗವಹಿಸಿದ್ದಾರೆ ಎಂದು ತಿಳಿಸಿದರು.

ಸಂಗೀತ ದಿಗ್ಗಜ ಎ.ಆರ್‌. ರೆಹಮಾನ್‌ ಅವರ ಮೂಲ ವಂದೇ ಮಾತರಂ ಹಾಡನ್ನು ಬಳಕೆ ಮಾಡಿಕೊಂಡು ದೇಶಭಕ್ತಿಗೀತೆಗೆ ಪರ್ಯಾಯವಾಗಿ ಭೂಮಿ ಭಕ್ತಿಗೀತೆಯನ್ನಾಗಿ ರೂಪಿಸಲಾಗಿದೆ. ಅಕ್ಷತಾ ಹಾವಂಜೆ ಅವರ ಸುಮಧುರ ಕಂಠದಲ್ಲಿ ಮೂಡಿ ಬಂದಿರುವ ಸಂಗೀತಕ್ಕೆ ಡೇನಿಯಲ್‌ ಮತ್ತು ಸುಹಿತ್‌ ಸಾಹಿತ್ಯ ರಚಿಸಿದ್ದಾರೆ. ಯತೀಶ್‌ ರೈ ಸಿನಿಮಾಟೋಗ್ರಫಿ ಮಾಡಿದ್ದಾರೆ. ಕರಾವಳಿಯ ಸಂಸ್ಕೃತಿಯ ನೋಟದೊಂದಿಗೆ ಪ್ಲಾಸ್ಟಿಕ್‌ನಿಂದ ಭೂಮಿ ರಕ್ಷಿಸಬೇಕೆಂಬ ಸಂದೇಶ ಸಾರುವ ವೀಡಿಯೋ ಸಾಂಗ್‌ ಮನೋಜ್ಞವಾಗಿದೆ.

ಗೋಷ್ಠಿಯಲ್ಲಿ ಸಂಗೀತ ನಿರ್ದೇಶಕರಾದ ಡೆನಿಯಲ್‌ ಮತ್ತು ಸುಹೀತ್‌, ಅಕ್ಷತಾ ಹಾವಂಜೆ, ನಿರ್ಮಾಪಕ ಚಂದ್ರಕಾಂತ್‌ ಶೆಣೈ ಇದ್ದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

15 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

19 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

20 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

20 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago