Featured

ಪ.ಜಾತಿ ಪಂಗಡದವರ ಶ್ರೇಯೋಭಿವೃದ್ದಿಗೆ ರೂಪಿಸಿದ ವಿಶೇಷ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಪ.ಜಾತಿ ಪಂಗಡದವರ ಶ್ರೇಯೋಭಿವೃದ್ದಿಗೆ ರೂಪಿಸಿದ ವಿಶೇಷ ಕಾನೂನುಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ -Vishwanews24

ಉಡುಪಿ : ಸರ್ಕಾರ ಪ.ಜಾತಿ ಹಾಗೂ ಪಂಗಡದವರ ಹಿತ ರಕ್ಷಣೆಗಾಗಿ ವಿಶೇಷ ಕಾನೂನುಗಳನ್ನು ಜಾರಿಗೆ ತಂದಿದೆ, ಅವುಗಳನ್ನು ನಿಯಮಾನುಸಾರ ಅನುಷ್ಠಾನಗೊಳಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ಸೂಕ್ತ ರೀತಿಯ ಎಲ್ಲಾ ರೀತಿಯ ನೆರವು ಹಾಗೂ ಪರಿಹಾರಗಳನ್ನು ಒದಗಿಸಿಕೊಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧಿಕಾರಿಗಳಿಗೆ ಸೂಚಿಸಿದರು. .

ಅವರು ಇಂದು ರಜತಾದ್ರಿಯ ಜಿ.ಪಂ.ಸಭಾAಗಣದಲ್ಲಿ ನಡೆದ, ಪ.ಜಾತಿ ಮತ್ತು ಪಂಗಡದವರ ಹಿತರಕ್ಷಣಾ ಹಾಗೂ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರವು ಪ.ಜಾತಿ ಹಾಗೂ ಪಂಗಡದವರ ಕಲ್ಯಾಣಾಭಿವೃದ್ದಿ ಸೇರಿದಂತೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಅನೇಕ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಮೀಸಲಿರಿಸಿದೆ ಅದನ್ನು ಅವರುಗಳ ಒಳಿತಿಗೆ ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಕಾನೂನುನ್ನು ಸಹಾ ಜಾರಿಗೆ ತಂದಿದ್ದು, ಇದರ ಪಾಲನೆ ಆಗಬೇಕು ಎಂದರು.

ಜಿಲ್ಲೆಯಲ್ಲಿ ಡಿಸಿ ಮನ್ನಾ ಭೂಮಿಯನ್ನು ಉಳ್ಳವರೇ ಅತಿಕ್ರಮಣ ಮಾಡಿ ಬಳಕೆ ಮಾಡುತಿರುವ ಬಗ್ಗೆ ಹೆಚ್ಚಿನ ದೂರುಗಳು ಕೇಳಿ ಬರುತ್ತಿವೆ, ಇವುಗಳ ಬಗ್ಗೆ ಕೂಲಂಕುಷವಾಗಿ ಪರಿಶೀಲಸಿ, ಅತಿಕ್ರಮಣ ತೆರವುಗೊಳಿಸಿ, ಅರ್ಹ ಫಲಾನುಭವಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಅರಣ್ಯ ಇಲಾಖೆಯವರು ಈ ಭೂಮಿಯನ್ನು ಅತಿಕ್ರಮಣ ಮಾಡಿದ್ದಲ್ಲಿ ಅವರಿಂದ ವಾಪಸ್ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸರ್ಕಾರ ವಿವಿಧ ಯೋಜನೆಯಡಿ ವಸತಿ ನಿರ್ಮಾಣ ಮಾಡಲು ನೀಡುತ್ತಿರುವ ಕಡಿಮೆ ಅನುದಾನದಿಂದ ವ್ಯವಸ್ಥಿತ ಸೂರು ನಿರ್ಮಾಣ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕೇಳಿ ಬರುತ್ತಿದೆ , ಅನುದಾನದ ಮೊತ್ತವನ್ನು ಹೆಚ್ಚಿಸಲು ಸರ್ಕಾರದ ಗಮನಕ್ಕೆ ತರುವುದರೊಂದಿಗೆ ಅದನ್ನು ಹೆಚ್ಚಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ತಿಳಿಸಿದರು.

ಕಳೆದ 2012 ರಿಂದ ಈ ವರೆಗೆ ಜಿಲ್ಲೆಯಲ್ಲಿ ಪ.ಜಾತಿ ಹಾಗೂ ಪಂಗಡದವರ 28 ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದು 26 ಪ್ರಕರಣಗಳು ದಾಖಲಾಗಿ ಅವುಗಳಲ್ಲಿ 13 ಪ್ರಕರಣಗಳು ಖುಲಾಸೆಯಾಗಿದ್ದು, 1 ಪ್ರಕರಣದಲ್ಲಿ ಶಿಕ್ಷೆಯಾಗಿ, 12 ಪ್ರಕರಣಗಳು ಬಾಕಿ ಇವೆ, ಹೆಚ್ಚಿನ ಪ್ರಕರಣಗಳು ಖುಲಾಸೆಯಾಗಲು ಸರಿಯಾದ ಕಾರಣವೇನು ಎಂಬುದನ್ನು ಅರಿತು, ಬಾಕಿ ಇರುವ ಮುಂದಿನ ಪ್ರಕರಣಗಳಲ್ಲಿ ಆರೋಪಿತರಿಗೆ ಶಿಕ್ಷೆಯಾಗುವಂತೆ ಎಚ್ಚರವಹಿಸಬೇಕು ಎಂದರು.

ಪ.ಜಾತಿ ಹಾಗೂ ಪಂಗಡಕ್ಕೆ ಸೇರದೆ ಇರುವ ಅನರ್ಹ ಅಭ್ಯರ್ಥಿಗಳೂ ಸಹ ಸುಳ್ಳು ಜಾತಿ ಪ್ರಮಾಣಪತ್ರವನ್ನು ಪಡೆಯುತಿದ್ದಾರೆ ಎಂಬ ದೂರುಗಳು ಇವೆ. ಅಂತಹ ದೂರುಗಳು ಬಂದಲ್ಲಿ ಪರಿಶೀಲಿಸಿ , ಅಂತಹ ಪ್ರಮಾಣಪತ್ರ ರದ್ದುಮಾಡುವುದರ ಜೊತೆಗೆ ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಜಾತಿ ನಿಂದನೆ ಪ್ರಕರಣಗಳನ್ನು ದಾಖಲಿಸಿದಾಗ ಪೊಲೀಸ್ ಇಲಾಖೆಯವರು ಪ್ರಕರಣ ಕುರಿತು ಸತ್ಯಾ ಸತ್ಯತೆ ಹಾಗೂ ಸಾಕ್ಷಾö್ಯಧಾರಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅವುಗಳ ಮೇಲೆ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆಗೆ ಅರ್ಜಿ ಸಲ್ಲಿಸಲು ಸಾಕಷ್ಟು ಅವಕಾಶಗಳಿದ್ದು, ಪ.ಜಾತಿ ಹಾಗೂ ಪಂಗಡದವರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದ ಅವರು , ಮನೆ ನಿರ್ಮಾಣ ಮಾಡಲು ಭೂ ಪರಿವರ್ತನೆ ಕುರಿತು ಸೂಕ್ತ ನಿರ್ದೇಶನ ಕೋರಿ ಸರ್ಕಾರಕ್ಕೆ ಪತ್ರ ಬರೆದಿರುವಾಗಿ ತಿಳಿಸಿದರು.

ಜಿ.ಪಂ. ಸಿಇಓ ಡಾ.ನವೀನ್ ಭಟ್ ಮಾತನಾಡಿ, ಗ್ರಾ,ಪಂ. ವ್ಯಾಪ್ತಿಯಲ್ಲಿ ಕ್ರಿಯಾ ಯೋಜನೆ ರೂಪಿಸುವಾಗ ಪ.ಜಾತಿ ಹಾಗೂ ಪಂಗಡದವರ ಸದಸ್ಯರು ಸೇರಿದಂತೆ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಿಯಾಯೋಜನೆಗೆ ಅನುಮೋದನೆ ಪಡೆಯುವಂತೆ ಎಲ್ಲಾ ಗ್ರಾಪಂ ಗಳಿಗೆ ನಿರ್ದೇಶನ ನೀಡುವುದರ ಜೊತೆಗೆ , ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಮೀಸಲಿಡುವಂತೆ ತಿಳಿಸಲಾಗಿದೆ ಎಂದರು.

ಪ.ಜಾತಿ ಹಾಗೂ ಪಂಗಡದವರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ದಿ ಸಾಧಿಸುವ ಉದ್ದೇಶದಿಂದ ಅನೇಕ ಇಲಾಖೆಗಳ ಮೂಲಕ ಸಹಾಯಧನ ನೀಡುವ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು , ಯೋಜನೆಯ ಅರ್ಹರ ಆಯ್ಕೆ ಪಟ್ಟಿಯನ್ನು ಆರ್ಥಿಕ ನೆರವು ನೀಡಲು ಬ್ಯಾಂಕ್ ಗಳಿಗೆ ಕಳುಹಿಸಿದಾಗ ಅಲ್ಲಿನ ಸಿಬ್ಬಂದಿ ವರ್ಗದವರು ಸರಿಯಾದ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಈ ಬಗ್ಗೆ ಪರಿಶೀಲನೆ ಮಾಡಬೇಕೆಂದು ಲೀಡ್ ಬ್ಯಾಂಕ್ ನ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಪ.ಜಾತಿ ಹಾಗೂ ಪಂಗಡದ ವಿವಿಧ ಸಂಘಟನೆಗಳು ಮುಖಂಡರು ಮತ್ತು ಸಾರ್ವಜನಿಕರು ತಮ್ಮ ಸಮಸ್ಯೆ ಮತ್ತು ಕುಂದುಕೊರತೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ, ಎಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು , ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago