ಬೆಂಗಳೂರು ; ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಮಹಾಘಟಬಂಧನ್ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂಬುದನ್ನು ಘೋಷಿಸಲಾಗುತ್ತದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕಳೆದ ಕೆಲ ದಿನಗಳಿಂದ ರಾಷ್ಟ್ರ ರಾಜಕಾರಣದಲ್ಲಿ ಸಕ್ರೀಯರಾಗಿದ್ದಾರೆ. ಬಿಜೆಪಿಯೇತರ ಎಲ್ಲಾ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ನಿಟ್ಟಿನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ಮಂಗಳವಾರ ದೆಹಲಿಯಲ್ಲಿ ನಡೆದ ವಿಪಕ್ಷಗಳ ಸಭೆ ಹಾಗೂ ಕೋಲ್ಕತಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜೊತೆಗಿನ ಚರ್ಚೆ ಮುಗಿಸಿ ನಿನ್ನೆ ಸಂಜೆ ವೇಳೆಗೆ ದೇವೇಗೌಡ ಅವರನ್ನು ಭೇಟಿ ಮಾಡಲು ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಆಗಮಿಸಿದ್ದರು.
ಇನ್ನೂ ಮಹಾಘಟಬಂಧನ್ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ರಾಹುಲ್ ಗಾಂಧಿಯೇ? ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ದೇವೇಗೌಡ, “ಚುನಾವಣೆ ಫಲಿತಾಂಶದ ನಂತರ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂದು ನಿಶ್ಚಯಿಸಲಾಗುವುದು. ಈ ಕುರಿತು ನಮ್ಮ ಮುಂದಿನ ನಡೆ ಏನು? ಎಂಬುದರ ಕುರಿತು ಚರ್ಚೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…