ಫೆಂಗಲ್ ಚಂಡಮಾರುತ ಪ್ರಭಾವ : ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಣೆ – vishwanews24

Featured, ಉಡುಪಿ, ದಕ್ಷಿಣ ಕನ್ನಡ

ಫೆಂಗಲ್ ಚಂಡಮಾರುತ ಪ್ರಭಾವ : ಕರಾವಳಿ ಜಿಲ್ಲೆಗಳಲ್ಲಿ ಬಹುತೇಕ ಭಾಗಗಳಲ್ಲಿ ಮಳೆ ಸಾಧ್ಯತೆ

ಮಂಗಳೂರು : ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿಯಲ್ಲೂ ಫೆಂಗಲ್ ಚಂಡಮಾರುತ ಪ್ರಭಾವ ಇದ್ದು ನಿನ್ನೆಯಿಂದಲೂ ಮೋಡಕವಿದ ವಾತಾವರಾಣವಿದ್ದು ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯ ಬಿಜೆಪಿಯ ಸ್ಥಿತಿಯ ಬಗ್ಗೆ ಹೈಕಮಾಂಡ್‌ಗೆ ವಿವರ ಸಲ್ಲಿಸುತ್ತೇನೆ : ಶೋಕಾಸ್ ನೋಟಿಸ್‌ಗೆ ಯತ್ನಾಳ್ ಪ್ರತಿಕ್ರಿಯೆ – vishwanews24

ಚಂಡಮಾರುತದ ಹಿನ್ನೆಲೆಯಲ್ಲಿ ಡಿ. 2 ಮತ್ತು 3 ರಂದು 35 ರಿಂದ 85 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

‘ಡಿ. 3 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಡಿ.4 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ,” ಎಂದು ತಿಳಿಸಿದ್ದಾರೆ.

ಪಡಿತರ ಚೀಟಿಯಲ್ಲಿ ನಿಮ್ಮ ಹೆಸರು ಇದೆಯಾ? ಇಲ್ವಾ .. ಈ ರೀತಿ ಸುಲಭ ವಿಧಾನದಲ್ಲಿ ಚೆಕ್ ಮಾಡಿಕೊಳ್ಳಿ – vishwanews24

Leave a Reply