ಮಂಗಳೂರು : ತಮಿಳುನಾಡಿನಲ್ಲಿ ಅಬ್ಬರಿಸಿದ ಫೆಂಗಲ್ ಚಂಡಮಾರುತ ಇದೀಗ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದೆ. ಈಗಾಗಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿಯಲ್ಲೂ ಫೆಂಗಲ್ ಚಂಡಮಾರುತ ಪ್ರಭಾವ ಇದ್ದು ನಿನ್ನೆಯಿಂದಲೂ ಮೋಡಕವಿದ ವಾತಾವರಾಣವಿದ್ದು ಇಂದು ಮತ್ತು ನಾಳೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಂಡಮಾರುತದ ಹಿನ್ನೆಲೆಯಲ್ಲಿ ಡಿ. 2 ಮತ್ತು 3 ರಂದು 35 ರಿಂದ 85 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು, ಉಡುಪಿಯಲ್ಲೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
‘ಡಿ. 3 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಮೈಸೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಡಿ.4 ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ,” ಎಂದು ತಿಳಿಸಿದ್ದಾರೆ.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…