ಉಡುಪಿ: ಮುಂದೂಡಲ್ಪಟ್ಟಿದ್ದ ಮಲ್ಪೆ ಬೀಚ್ ಉತ್ಸವವು ಫೆಬ್ರವರಿ 1 ಮತ್ತು 2 ರಂದು ನಡೆಯಲಿದೆ. ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ನಿರ್ಮಿತಿ ಕೇಂದ್ರ, ಕರಾವಳಿ ಪ್ರವಾಸೋದ್ಯಮ ಸಂಘಟನೆ, ಪಶುಪಲನಾ ಇಲಾಖೆ ಹಾಗೂ ಸ್ಥಳಿಯ ಸಂಘ ಸಂಸ್ಥೆಗಳ ವತಿಯಿಂದ ಬೀಚ್ ಉತ್ಸವ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ವಿವಿಧ ಆಟೋಟ ಸ್ವರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಜಾತ್ರೆ, ಶ್ವಾನ ಪ್ರದರ್ಶನ, ಗಾಳಿಪಟ ಪ್ರದರ್ಶನ, ಮರಳು ಶಿಲ್ಪ, ಚಿತ್ರಕಲೆ ಸ್ವರ್ಧೆ, ಪುರುಷರ ಹೊನಲು ಬೆಳಕಿನ ಅವಿಭಾಜಿತ ಪ್ರೋ ಕಬಡ್ಡಿ ಪಂದ್ಯಾವಳಿ ಹಾಗೂ ಕಲರ್ಸ್ ಕನ್ನಡ ವಾಹಿನಿಯ ಕನ್ನಡ ಕೋಗಿಲೆ ಖ್ಯಾತಿಯ ಹೆಸರಾಂತ ಕಲಾವಿದರಿಂದ ಸಂಗೀತ ರಸಮಂಜರಿ ಹಾಗೂ ಜೀ ಕನ್ನಡ ವಾಹಿನಿಯಲ್ಲಿ ನಡೆಯುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಲಾವಿದರಿಂದ ನೃತ್ಯ ವೈವಿಧ್ಯಮಯ ಕಾರ್ಯಕ್ರಮ, ಅಂತರಾಷ್ಟ್ರಿಯ ಮಟ್ಟದ ಚಿತ್ರ ಕಲಾವಿದರಿಂದ ವರ್ಣ ವಸಂತ ಚಿತ್ರ ಪ್ರದರ್ಶನ ಕಾರ್ಯಕ್ರಮ ಹಾಗೂ ಕೇರಳದ ಹೆಸರಾಂತ ಖ್ಯಾತ ಕಲಾವಿದರಿಂದ ವಿಭಿನ್ನ ರೀತಿಯ ನೃತ್ಯ ಪ್ರದರ್ಶನ ನಡೆಯಲಿದೆ ಎಂದರು.
ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರವಾಸೋದ್ಯಮ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…