ಫೆಬ್ರವರಿ 1 ಮತ್ತು 2 ರಂದು ಮಲ್ಪೆ ಬೀಚ್ ಉತ್ಸವ -Vishwanews24

ಉಡುಪಿ: ಮುಂದೂಡಲ್ಪಟ್ಟಿದ್ದ ಮಲ್ಪೆ ಬೀಚ್ ಉತ್ಸವವು ಫೆಬ್ರವರಿ 1 ಮತ್ತು 2 ರಂದು ನಡೆಯಲಿದೆ. ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಈ ಸಂಬಂಧ ಜಿಲ್ಲಾಧಿಕಾರಿ ಜಿ. ಜಗದೀಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ನಿರ್ಮಿತಿ ಕೇಂದ್ರ, ಕರಾವಳಿ ಪ್ರವಾಸೋದ್ಯಮ ಸಂಘಟನೆ, ಪಶುಪಲನಾ ಇಲಾಖೆ ಹಾಗೂ ಸ್ಥಳಿಯ ಸಂಘ ಸಂಸ್ಥೆಗಳ ವತಿಯಿಂದ ಬೀಚ್ ಉತ್ಸವ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ವಿವಿಧ ಆಟೋಟ ಸ್ವರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಜಾನಪದ ಜಾತ್ರೆ, ಶ್ವಾನ ಪ್ರದರ್ಶನ, ಗಾಳಿಪಟ ಪ್ರದರ್ಶನ, ಮರಳು ಶಿಲ್ಪ, ಚಿತ್ರಕಲೆ ಸ್ವರ್ಧೆ, ಪುರುಷರ ಹೊನಲು ಬೆಳಕಿನ ಅವಿಭಾಜಿತ ಪ್ರೋ ಕಬಡ್ಡಿ ಪಂದ್ಯಾವಳಿ ಹಾಗೂ ಕಲರ್ಸ್ ಕನ್ನಡ ವಾಹಿನಿಯ ಕನ್ನಡ ಕೋಗಿಲೆ ಖ್ಯಾತಿಯ ಹೆಸರಾಂತ ಕಲಾವಿದರಿಂದ ಸಂಗೀತ ರಸಮಂಜರಿ ಹಾಗೂ ಜೀ ಕನ್ನಡ ವಾಹಿನಿಯಲ್ಲಿ ನಡೆಯುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಲಾವಿದರಿಂದ ನೃತ್ಯ ವೈವಿಧ್ಯಮಯ ಕಾರ್ಯಕ್ರಮ, ಅಂತರಾಷ್ಟ್ರಿಯ ಮಟ್ಟದ ಚಿತ್ರ ಕಲಾವಿದರಿಂದ ವರ್ಣ ವಸಂತ ಚಿತ್ರ ಪ್ರದರ್ಶನ ಕಾರ್ಯಕ್ರಮ ಹಾಗೂ ಕೇರಳದ ಹೆಸರಾಂತ ಖ್ಯಾತ ಕಲಾವಿದರಿಂದ ವಿಭಿನ್ನ ರೀತಿಯ ನೃತ್ಯ ಪ್ರದರ್ಶನ ನಡೆಯಲಿದೆ ಎಂದರು.

ಸಭೆಯಲ್ಲಿ ಉಡುಪಿ ಶಾಸಕ ರಘುಪತಿ ಭಟ್, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹಲೋತ್, ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರವಾಸೋದ್ಯಮ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago