Featured

ಫೆಬ್ರವರಿ 1 ರಿಂದ ಹೊಸ ಕೇಬಲ್ ನೀತಿ ಜಾರಿಗೆ _ Vishwanews24

ಬೆಂಗಳೂರು : ಕೇಬಲ್ ಟಿವಿ ಮತ್ತು ಡಿಟಿಹೆಚ್ ನ ಅಸ್ತಿತ್ವದಲ್ಲಿರುವ ನಿಯಮಗಳು ಜನವರಿ 31, 2019 ರಿಂದ ರದ್ದಾಗಲಿದ್ದು, ಫೆಬ್ರವರಿ 1 ರಿಂದ ಹೊಸ ಕೇಬಲ್ ನೀತಿ ಜಾರಿಗೆ ಬರಲಿದೆ.

ಕೇಬಲ್ ಟಿವಿ ಮತ್ತು ಡಿಟಿಹೆಚ್ ದರದ ಮಾಹಿತಿಗಳನ್ನು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ವೆಬ್ಸೈಟ್ ನಲ್ಲಿ ಪ್ರಕಟಿಸಿದ್ದು, ಟ್ರಾಯ್ ನಿಯಮದ ಪ್ರಕಾರ ಜನವರಿ 31 ರೊಳಗೆ ಗ್ರಾಹಕರು ತಮಗೆ ಇಷ್ಟವಾದ ಪೇ ಚಾನೆಲ್ ಗಳನ್ನು ಆಯ್ಕೆ ಮಾಡಿಕೊಳ್ಳಬೇಕು.

ನ್ಯೂಸ್ 18 ಕನ್ನಡ 25 ಪೈಸೆ, ಸ್ಟಾರ್ ಸ್ಪೋರ್ಟ್ಸ್ ಕನ್ನಡ 19 ರೂ., ಚಿಂಟು ಟಿವಿ ಕನ್ನಡ 6 ರೂ., ಉದಯ ಕಾಮಿಡಿ 6 ರೂ., ಉದಯ ಮೂವೀಸ್ 16 ರೂ., ಉದಯ ಮ್ಯೂಸಿಕ್ 6 ರೂ., ಉದಯ ಟಿವಿ 17 ರೂ., ಕಲರ್ಸ್ ಕನ್ನಡ 19 ರೂ., ಸ್ಟಾರ್ ಸುವರ್ಣ 19 ರೂ., ಜೀ ಕನ್ನಡ 19 ರೂ., ಸುವರ್ಣ ಪ್ಲಸ್ ಚಾನಲ್ ಗೆ 5 ರೂ. ದರ ಇದೆ.
ಡಿಸ್ಕವರಿ ಚಾನೆಲ್ ಗೆ 4 ರೂ., ಡಿಸ್ಕವರಿ ಕಿಡ್ಸ್ ಚಾನೆಲ್ ಗೆ 3 ರೂ., ಅನಿಮಲ್ ಪ್ಲಾನೆಟ್ ಗೆ 24 ರೂ. ದರ ನಿಗದಿ ಮಾಡಲಾಗಿದೆ. ಸ್ಪೋರ್ಟ್ಸ್ ಚಾನೆಲ್ ಗಳಾದ ಸೋನಿ ಇ.ಎಸ್.ಪಿ.ಎನ್. ಹೆಚ್ ಡಿಗೆ 7 ರೂ., ಸೋನಿ ಇ.ಎಸ್.ಪಿ.ಎನ್. ಗೆ 5 ರೂ., ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಗೆ 4 ರೂ. ದರ ನಿಗದಿ ಮಾಡಲಾಗಿದೆ.

ಬೇಸಿಕ್ ಪ್ಯಾಕೇಜ್ ನಲ್ಲಿ 130 ರೂ.ಗೆ 100 ಟಿವಿ ಚಾನೆಲ್ ಸಿಗುತ್ತದೆ. ಆದರೆ ಇದಕ್ಕೆ ಜಿ.ಎಸ್.ಟಿ. ಸೇರಿ 153 ರೂ. ಪಾವತಿಸಬೇಕಿದೆ. ಹಾಗೇ 100 ಕ್ಕಿಂತ ಹೆಚ್ಚು ಚಾನೆಲ್ ವೀಕ್ಷಿಸಲು ರೂ. 20ಕ್ಕೆ 25 ಚಾನೆಲ್ ಗಳ ಸ್ಲ್ಯಾಬ್ ಪಡೆಯಬಹುದು. ಪೇಡ್ ಚಾನೆಲ್ ಗಳ ಆಯ್ಕೆಯೊಂದಿಗೆ ಪಾವತಿಸಬೆಕಾಗುವ ಬಿಲ್ ಕೂಡ ಏರಿಕೆಯಾಗುತ್ತದೆ. ಉಚಿತ ಚಾನೆಲ್ ಗಳ ಸೇವೆ ಹಿಂದಿನಂತೆಯೇ ಮುಂದುವರೆಯಲಿದ್ದು, ಪೇಯ್ಡ್ ಚಾನೆಲ್ ಗಳ ಸೇವೆಯಲ್ಲಿ ಬದಲಾವಣೆಯಾಗಲಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago