ಫೆಬ್ರವರಿ 14ರಂದು ಪುಲ್ವಾಮಾ ಹುತಾತ್ಮ ದಿನವಾಗಿ ಆಚರಿಸಿ : ಬಜರಂಗದಳ ಕರೆ -Vishwanews24

ಮಂಗಳೂರು : ಫೆಬ್ರವರಿ 14 ಹತ್ತಿರವಾಗುತ್ತಿದ್ದಂತೆ ಒಂದೆಡೆ ಯುವ ಮನಸ್ಸುಗಳಲ್ಲಿ ಪ್ರೀತಿಯ ಚಿಲುಮೆ ಪುಟಿದೇಳುತ್ತಿದೆ. ಆ ದಿನವನ್ನು ತುಂಬಾ ಸ್ಪೇಷಲ್ ಆಗಿ ಆಚರಿಸಬೇಕೆಂಬ ಮಹದಾಸೆ ಹೊತ್ತಿರುವ ಪ್ರೇಮಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಈ ದಿನವನ್ನು ವಿರೋಧಿಸುತ್ತಾ ಬಂಧಿರುವ ಹಿಂದೂಪರ ಸಂಘಟನೆಗಳು ಈ ಬಾರಿಯೂ ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು ಆಚರಿಸದಂತೆ ಕರೆ ನೀಡಿದೆ. ಇದಕ್ಕೆ ಕಾರಣವೂ ಕೂಡ ಇದೆ.

ಫೆಬ್ರವರಿ 14ರಂದು ದೇಶ ಇವರೆಗೆ ಕಂಡು ಕೇಳರಿಯದ ಭಯೋತ್ಪಾದಕ ದಾಳಿಗೆ ಒಳಗಾದ ದಿನ. 2019ರ ಫೆಬ್ರವರಿ 14 ರಂದು ಜಮ್ಮುವಿನ ಫುಲ್ವಾಮಾದಲ್ಲಿ ಸಿಆರ್ ಪಿಎಫ್ ತುಕಡಿಯನ್ನು ಗುರಿಯಾಗಿಸಿ ಜೈಶೆ ಮೊಹಮ್ಮದ್ ಉಗ್ರ ಸಂಘಟನೆ ಆತ್ಮಾಹುತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 44 ಸಿಆರ್ ಪಿಎಫ್ ಯೋಧರು ಹುತಾತ್ಮರಾದರೆ, 70 ಕ್ಕೂ ಹೆಚ್ಚು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು.

ಈ ಹಿನ್ನಲೆಯಲ್ಲಿ ಫೆಬ್ರವರಿ 14 ರಂದು ಪ್ರೇಮಿಗಳ ದಿನ ಬದಲು ಪುಲ್ವಾಮಾ ಹುತಾತ್ಮರ ದಿನವನ್ನಾಗಿ ಆಚರಿಸಲು ಹಿಂದೂ ಸಂಘಟನೆಗಳು ಕರೆ ನೀಡಿವೆ. ಬಜರಂಗದಳ ಫೆಬ್ರವರಿ 14 ರಂದು ಪುಲ್ವಾಮಾ ಹುತಾತ್ಮ ದಿನವನ್ನಾಗಿ ಆಚರಿಸಲು ಕರೆ ನೀಡಿದ್ದು, ಕೇಂದ್ರ ಸರಕಾರ ಫೆಬ್ರವರಿ 14 ನ್ನು ಪುಲ್ವಾಮಾ ಘಟನೆಯಲ್ಲಿ ವೀರ ಮರಣವನ್ನಪ್ಪಿದ ಯೋಧರ ಗೌರವಾರ್ಥ ಹುತಾತ್ಮ ದಿನವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago