Featured

ಫೆಬ್ರವರಿ 14 – ಪುಲ್ವಾಮಾ ದಾಳಿಗೆ 4 ವರ್ಷ: ಭಾರತದ ಇತಿಹಾಸದಲ್ಲಿ ಕರಾಳ ದಿನ – Vishwanews24

ಫೆಬ್ರವರಿ 14- ಪುಲ್ವಾಮಾ ದಾಳಿಗೆ 4 ವರ್ಷ: ಭಾರತದ ಇತಿಹಾಸದಲ್ಲಿ ‘ಕರಾಳ ದಿನ

ನವದೆಹಲಿ: ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ನಾಲ್ಕು ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್‌ಪಿಎಫ್ ಅಧಿಕಾರಿಗಳ ಸಾವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾದಾಗ ಇಡೀ ಭಾರತವೇ ಶೋಕಸಾಗರದಲ್ಲಿ ಮುಳುಗಿತ್ತು.

ಜೈಶ್-ಎ-ಮೊಹಮ್ಮದ್‌ ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಮಾರ್ಧದಲ್ಲಿ ಜೀವವನ್ನು ಬಲಿಕೊಟ್ಟರು. ಸ್ಫೋಟಕ ತುಂಬಿದ ವಾಹನವನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಬೆಂಗಾವಲು ಪಡೆಗೆ ಅತ್ಯಂತ ಭೀಕರವಾಗಿ ದಾಳಿ ನಡೆಸಲಾಗಿತ್ತು. ಫೆಬ್ರವರಿ 14, 2019 ರಂದು ಮಧ್ಯಾಹ್ನ ಹೊತ್ತಿಗೆ ಈ ಭೀಕರ ದಾಳಿ ನಡೆದಿತ್ತು.

 

14 ಫೆಬ್ರವರಿ 2019
ಜಮ್ಮು ಮತ್ತು ಕಾಶ್ಮೀರದಲ್ಲಿ ನಲವತ್ತು ಸಿಆರ್‌ಪಿಎಫ್‌ ಯೋಧರು ಪ್ರಯಾಣಿಸುತ್ತಿದ್ದ ಎರಡು ಬಸ್‌ಗಳನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್‌ ದಾಳಿ ನಡೆಸಲಾಗಿತ್ತು. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬಸ್‌ಗಳು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಅರೆಸೇನಾಪಡೆಯ ವಾಹನಗಳ ದೊಡ್ಡ ಗುಂಪಿನ ಭಾಗವಾಗಿತ್ತು. ದಾಳಿಯ ಸ್ವಲ್ಪ ಸಮಯದ ನಂತರ ಜೈಶ್ ಇ ಮೊಹಮ್ಮದ್ ಸಂಘಟನೆ ವಿಡಿಯೋವನ್ನು ಬಿಡುಗಡೆ ಮಾಡಿತು, ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಂಡಿಬಾಗ್, ಕಾಕಪೋರಾದಲ್ಲಿ ವಾಸಿಸುತ್ತಿದ್ದ ಸ್ಥಳೀಯ ಕಾಶ್ಮೀರಿ ಜಿಹಾದಿ ಎಂದು ಹೇಳಿಕೊಂಡಿದ್ದಾನೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago