Featured

ಫೆ. 01 ರಿಂದ ಮಂಗಳೂರು – ಪೂನಾ ನಡುವೆ ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಅಕ್ಸಿಲ್ ಎ.ಸಿ. ಸ್ಲೀಪರ್ ಸಾರಿಗೆ ಪ್ರಾರಂಭ -Vishwanews24

ಫೆ. 01 ರಿಂದ ಮಂಗಳೂರು – ಪೂನಾ ನಡುವೆ ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಅಕ್ಸಿಲ್ ಎ.ಸಿ. ಸ್ಲೀಪರ್ ಸಾರಿಗೆ ಪ್ರಾರಂಭ -Vishwanews24

ಮಂಗಳೂರು: ಕರಾರಸಾ. ನಿಗಮವು ಮಂಗಳೂರಿನಿಂದ ಉಡುಪಿ-ಕುಂದಾಪುರ-ಭಟ್ಕಳ-ಅಂಕೋಲಾ-ಹುಬ್ಬಳ್ಳಿ-ಧಾರವಾಡ-ಬೆಳಗಾಂ-ನಿಪ್ಪಾಣಿ ಮಾರ್ಗವಾಗಿ ಪೂನಾಕ್ಕೆ ತೆರಳುತ್ತಿದ್ದ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮೇಲ್ದರ್ಜೆಗೇರಿಸಿ “ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿಅಕ್ಸ್ಲ್ ಎ.ಸಿ. ಸ್ಲೀಪರ್” ವಾಹನದೊಂದಿಗೆ ಫೆಬ್ರವರಿ 01 ರಿಂದ ಕಾರ್ಯಾಚರಣೆ ಮಾಡಲಾಗುವುದು.

ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಉಡುಪಿಗೆ 5.10ಕ್ಕೆ ತಲುಪಲಿದೆ., ಕುಂದಾಪುರದಿಂದ 6 ಗಂಟೆಗೆ ಹೊರಟು 7.30 ಕ್ಕೆ ಭಟ್ಕಳ ಮಾರ್ಗವಾಗಿ ಪೂನಾಕ್ಕೆ ಬೆಳಿಗ್ಗೆ 6.30ಕ್ಕೆ ತಲುಪಲಿದೆ. ಮರು ಪ್ರಯಾಣದಲ್ಲಿ ಪೂನಾದಿಂದ ಸಂಜೆ 6.30 ಗಂಟೆಗೆ ಹೊರಟು ಕುಂದಾಪುರಕ್ಕೆ ಬೆಳಗ್ಗೆ 6.30ಕ್ಕೆ, ಹಾಗೂ ಉಡುಪಿಗೆ ಬೆಳಗ್ಗೆ 7.10 ಕ್ಕೆ ತಲುಪಲಿದೆ. ನಂತರ ಮಂಗಳೂರಿಗೆ ಬೆಳಿಗ್ಗೆ 8.10 ಕ್ಕೆ ತಲುಪಲಿದೆ.

ಭಾರತದ ಬೃಹತ್ ಲಸಿಕೆ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ -Vishwanews24

ಸದರಿ ಸಾರಿಗೆಯಲ್ಲಿ ಮಂಗಳೂರಿನಿಂದ ಪೂನಾಕ್ಕೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣದರ ರೂ.1,340, ಉಡುಪಿಯಿಂದ ಪೂನಾಕ್ಕೆ ರೂ. 1,300 ಹಾಗೂ ಕುಂದಾಪುರದಿಂದ-ಪೂನಾಕ್ಕೆ ರೂ. 1,280 ನ್ನು ನಿಗಧಿ ಪಡಿಸಲಾಗಿದೆ.

ಸಾರಿಗೆಗೆ ಅವತಾರ್ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು, ಸಾರ್ವಜನಿಕರು ವೆಬ್ಸೈಟ್ www.ksrtc.in ಗೆ ಅಥವಾ ಹತ್ತಿರದ ರಿಸರ್ವೇಶನ್ ಕೌಂಟರ್ ನ್ನು ಸಂಪರ್ಕಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಬಸ್ಸು ನಿಲ್ದಾಣ ದೂ. ಸಂಖ್ಯೆ: 7760990720, ಉಡುಪಿ ಬಸ್ಸು ನಿಲ್ದಾಣ ದೂ.ಸಂಖ್ಯೆ: 9663266400, ಕುಂದಾಪುರ ಬಸ್ಸು ನಿಲ್ದಾಣ ದೂ.ಸಂಖ್ಯೆ: 9663266009 ಸಂಪರ್ಕಿಸಬಹುದು. ಅಥವಾ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮಂಗಳೂರು ವಿಭಾಗವನ್ನು ಸಂಪರ್ಕಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನ ನೂತನ ಉಪ ಸಭಾಪತಿಯಾಗಿ ಬಿಜೆಪಿಯ ಎಂ.ಕೆ.ಪ್ರಾಣೇಶ್ ಆಯ್ಕೆ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

5 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

5 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

6 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

10 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

10 hours ago