ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಚಳಿ ಇದ್ದು, ಕೆಲವೆಡೆ ಮಂಜು ಕವಿದ ವಾತಾವರಣವಿತ್ತು. ತಮಿಳುನಾಡು, ಕಾರೈಕಲ್, ಕೇರಳ, ಆಂಧ್ರಪ್ರದೇಶದ ಕರಾವಳಿ, ಕರ್ನಾಟಕದಲ್ಲಿ ಮಳೆಯಾಗಲಿದೆ. ವಿಜಯಪುರದಲ್ಲಿ 11.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…