ಉಡುಪಿ: ಈ ಬಾರಿಯ ಉಡುಪಿ ಜಿಲ್ಲಾ ರೈತ ಸಮ್ಮೇಳನವನ್ನು ಫೆ.11 ರಂದು ಉಚ್ಚಿಲದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಶ್ರೀಮತಿ ಶಾಲಿನಿ ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ಇದರ ಉಡುಪಿ ಜಿಲ್ಲಾಧ್ಯಕ್ಷರಾದ ನವೀನ್ ಚಂದ್ರ ಜೈನ್ ಅವರು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಸಮ್ಮೇಳನವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಅವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರವರು ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದ ರಾಜ್ಯಾಧ್ಯಕ್ಷ ಬಿ. ಎಮ್. ಕೋಕರೆ, ಮೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ, ದಕ್ಷಿಣ ಕನ್ನಡ ಹಾಲು ಉತ್ಪಾದಕರಾದ ಒಕ್ಕೂಟದ ಅಧ್ಯಕ್ಷ ಕೆ.ಪಿ. ಸುಚರೀತ ಶೆಟ್ಟಿ, ದಕ್ಷಿಣ ಕನ್ನಡದ ಮೊಗವೀರ ಮಹಾಜನ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಮಹಾಲಕ್ಷ್ಮೀ ದೇವಸ್ಥಾನದ ಅಧ್ಯಕ್ಷ ವಾಸುದೇವ ಸಾಲ್ಯಾನ್, ಹಾಪ್ ಕಾಮ್ಸ್ ಸೀತಾರಮ ಗಾಣಿಗ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಹಾಗೂ ಸಮ್ಮೇಳನದಲ್ಲಿ ಪೆರಂಪಳ್ಳಿ ಜೆ.ವಾಸುದೇವ ಭಟ್ ಅವರು ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಗೋಷ್ಠಿಗಳು ಹಾಗೂ ಸಮಾರೋಪದೊಂದಿಗೆ ಸಮ್ಮೇಳನ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ, ಜಿಲ್ಲಾ ಪದಾಧಿಕಾರಿಗಳಾದ ಸೀತಾರಾಮ ಗಾಣಿಗ, ಆಸ್ತೀಕ ಶಾಸ್ತ್ರೀ, ದೀಪಕ್ ಪೈ, ಚಂದ್ರಹಾಸ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ಪ್ರಶಾಂತ್ ಕುಮಾರ್, ಅನಂತ ಪದ್ಮನಾಭ ಉಡುಪ, ಮಹಿಳಾ ಪ್ರಮುಖರಾದ ನಿರ್ಮಲ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…