Featured

ಫೆ.12ರಿಂದ ಮಾ.13ರವರೆಗೆ ಮಂಗಳೂರು-ಮೂಡುಬಿದಿರೆ ಹೆದ್ದಾರಿ ದುರಸ್ತಿ: ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಬದಲಿ ರಸ್ತೆ – vishwanews24

ಫೆ.12ರಿಂದ ಮಾ.13ರವರೆಗೆ ಮಂಗಳೂರು-ಮೂಡುಬಿದಿರೆ ಹೆದ್ದಾರಿ ದುರಸ್ತಿ: ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ಬದಲಿ ರಸ್ತೆ

ಮಂಗಳೂರು: ತಾಲೂಕಿನ ಬಜ್ಪೆ ಎಡಪದವಿನ ಮಚ್ಚೂರು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕಾಮಗಾರಿ ನಡೆಯುತ್ತಿದ್ದು, ಇದೀಗ ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಹಾಗೂ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ವಾಹನಗಳ ಓಡಾಟಕ್ಕೆ ಇದ್ದ ಹಳೆ ರಸ್ತೆಯು ಘನ ವಾಹನಗಳ ಓಡಾಟದಿಂದಾಗಿ ಬಿರುಕು ಬಿಟ್ಟು ಅಲ್ಲಲ್ಲಿ ಕುಸಿಯಲು ಪ್ರಾರಂಭಿಸಿರುವುದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಫೆ. 12ರಿಂದ ಮಾ.13ರವರೆಗೆ 30 ದಿನಗಳ ಕಾಲ ರಸ್ತೆ ದುರಸ್ತಿ ಕಾಮಗಾರಿ ನಡೆಯಲಿದೆ.

ರಸ್ತೆ ದುರಸ್ತಿ ಕಾಮಗಾರಿ ನಡೆಯುವ ಸಮಯ ಸಾರ್ವಜನಿಕ ಹಿತದೃಷ್ಠಿಯಿಂದ ಮಂಗಳೂರು ಕಡೆಯಿಂದ ಮೂಡುಬಿದಿರೆ ಕಡೆಗೆ ಮತ್ತು ಮೂಡುಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವಾಹನಗಳು ತಾತ್ಕಾಲಿಕವಾಗಿ ಈ ಕೆಳಗಿನ ಬದಲಿ ರಸ್ತೆಗಳನ್ನು ಉಪಯೋಗಿಸಲು ಮಂಗಳೂರು ಪೊಲೀಸ್ ಆಯುಕ್ತರು ಸೂಚಿಸಿದ್ದಾರೆ.

ಇದನ್ನೂ ಓದಿ :

👉 ಮೂಡುಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಬರುವಂತಹ ಲಾರಿಗಳು ವಿದ್ಯಾಗಿರಿ ಮುಲ್ಕಿ ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ ಕಿನ್ನಿಗೋಳಿ ರಸ್ತೆಯಲ್ಲಿ ಸಂಚರಿಸಿ ಪಕ್ಷಿಕೆರೆ ಕ್ರಾಸ್ ನಲ್ಲಿ ಬಲಕ್ಕೆ ತಿರುಗಿ ಮುಲ್ಕಿ ಜಂಕ್ಷನ್ – ಸುರತ್ಕಲ್ ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು ಹಾಗೂ ಮಂಗಳೂರು ಕಡೆಯಿಂದ ಮೂಡುಬಿದಿರೆ ಕಡೆಗೆ ಸಂಚರಿಸುವ ಲಾರಿಗಳು ಇದೇ ರಸ್ತೆಯಲ್ಲಿ ಸಂಚರಿಸುವಂತೆ ಆಯುಕ್ತರು ತಿಳಿಸಿದ್ದಾರೆ.

👉 ಮೂಡುಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಇತರ ಎಲ್ಲಾ ಲಘುವಾಹನಗಳು ವಿದ್ಯಾಗಿರಿ ಮುಲ್ಕಿ ಕ್ರಾಸ್‌ನಲ್ಲಿ ಬಲಕ್ಕೆ ತಿರುಗಿ ಕಿನ್ನಿಗೋಳಿ ರಸ್ತೆಯಲ್ಲಿ ಸಂಚರಿಸಿ ಮೂರುಕಾವೇರಿ- ಕಟೀಲು-ಪೆರ್ಮುದೆ-ಬಜ್ಪೆ ಮೂಲಕ ಅಥವಾ ಪಕ್ಷಿಕೆರೆ ಕ್ರಾಸ್‌ನಲ್ಲಿ ಎಡಕ್ಕೆ ತಿರುಗಿ ಹಳೆಯಂಗಡಿ- ಸುರತ್ಕಲ್ ಮೂಲಕ ಮಂಗಳೂರು ಕಡೆಗೆ ಸಂಚರಿಸಬೇಕು. ಮಂಗಳೂರು ಕಡೆಯಿಂದ ಮೂಡುಬಿದಿರೆ ಕಡೆಗೆ ಸಂಚರಿಸುವ ಇತರ ಎಲ್ಲಾ ಲಘು ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿದೆ.

ಇದನ್ನೂ ಓದಿ  :

👉 ಮೂಡುಬಿದಿರೆ ಕಡೆಯಿಂದ ಮಂಗಳೂರು ಕಡೆಗೆ ಬರುವ ಸಾರ್ವಜನಿಕ ರೂಟ್ ಬಸ್ಸುಗಳು ಮತ್ತು ಸ್ಥಳೀಯರ ಲಘು ವಾಹನಗಳು ಮಾತ್ರ ದಡ್ಡಿ ಕ್ರಾಸ್ ಬಳಿ ಬಲಕ್ಕೆ ತಿರುಗಿ – ಪುಮಾರ್ ಪದವು ಕ್ರಾಸ್ – ಮಂಜನ ಕಟ್ಟೆ ಕ್ರಾಸ್ – ಅರ್ಜುನಕೋಡಿ – ಈಶ್ವರಕಟ್ಟೆ ಕ್ರಾಸ್ – ಮುಚ್ಚೂರು ಕ್ರಾಸ್ ಬಳಿ ಬಲಕ್ಕೆ ತಿರುಗಿ ಕೈಕಂಡ ಗುರುಪುರ ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು.

👉 ಮಂಗಳೂರು ಕಡೆಯಿಂದ ಗುರುಪುರ-ಕೈಕಂಬ ಮೂಲಕ ಮೂಡುಬಿದಿರೆ ಕಡೆಗೆ ಹೋಗುವ ಸಾರ್ವಜನಿಕ ರೂಟ್ ಬಸ್ಸುಗಳು ಮತ್ತು ಸ್ಥಳೀಯರ ಲಘು ವಾಹನಗಳು ಮಾತ್ರ ಗಂಜಿಮಠದಿಂದ ಮುಂದೆ ಮುಚ್ಚೂರು ಕ್ರಾಸ್ ಬಳಿ ಎಡಕ್ಕೆ ತಿರುಗಿ ಈಶ್ವರಕಟ್ಟೆ ಕ್ರಾಸ್-ಅರ್ಜುನಕೋಡಿ – ಮಂಜನ ಕಟ್ಟೆ ಕ್ರಾಸ್ -ಪುಮಾರ್ ಪದವು ಕ್ರಾಸ್- ದಡ್ಡಿ ಕ್ರಾಸ್ ಬಳಿ ಎಡಕ್ಕೆ ಸಂಚರಿಸಿ ಮೂಡಬಿದ್ರೆ ಕಡೆಗೆ ಹೋಗಬೇಕು.

👉 ಮಂಗಳೂರು ಕಡೆಯಿಂದ ಮೂಡುಬಿದಿರೆ ಮೂಲಕ -ಕಾರ್ಕಳ ಕಡೆಗೆ ಸಂಚರಿಸುವ ಎಲ್ಲಾ ಲಾರಿಗಳು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸುರತ್ಕಲ್-ಮುಲ್ಕಿ-ಪಡುಬಿದ್ರೆಯಿಂದಾಗಿ ಕಾರ್ಕಳ ಕಡೆಗೆ ಸಂಚರಿಸುವುದು.ಮಾರ್ಗ ಬದಲಾವಣೆ ಸಮಯ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಗಳು ಇರುವುದರಿಂದ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಿಎಚ್ ತಿಳಿಸಿದ್ದಾರೆ.

ಇದನ್ನೂ ಓದಿ  :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago