ಫೆ.13 ಕರ್ನಾಟಕ ಬಂದ್‌ ಪ್ರಯುಕ್ತ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ : ಶಿಕ್ಷಣ ಸಚಿವ ಸುರೇಶ್ ಕುಮಾರ್ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಫೆ.13 ಗುರುವಾರದಂದು ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ಯಾವುದೇ ಶಾಲಾ- ಕಾಲೇಜುಗಳಿಗೆ ಅಧಿಕೃತವಾಗಿ ರಜೆ‌ ಘೋಷಣೆ‌ ಮಾಡುವುದಿಲ್ಲವೆಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

ಅದಾಗಿಯೂ ಆಯಾ ಜಿಲ್ಲಾಡಳಿತಗಳು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಕ್ರಮ ವಹಿಸಬಹುದಾಗಿದೆಯೆಂದು ಸಚಿವರು ಸ್ಪಷ್ಟ ಪಡಿಸಿದ್ದಾರೆ.

ಕರ್ನಾಟಕ ಸಂಘಟನೆಗಳ ಒಕ್ಕೂಟ ಫೆ.13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ 600ಕ್ಕೂ ಅಧಿಕ ಸಂಘಟನೆಗಳು ಬೆಂಬಲ ಘೋಷಣೆ ಮಾಡಿದ್ದು, ಗುರುವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸಂಘಟನೆಗಳ ಒಕ್ಕೂಟ ಬಂದ್ ಕರೆ ನೀಡಿದೆ.