ನವದೆಹಲಿ: ಚೀನಾ, ಸಿಂಗಾಪುರ, ಕೊರಿಯಾ, ಥಾಯ್ಲೆಂಡ್ ಮತ್ತು ಜಪಾನ್‌ನಿಂದ ಆಗಮಿಸುವ ಪ್ರಯಾಣಿಕರಿಗೆ ವಿಧಿಸಲಾಗಿದ್ದ ಕಡ್ಡಾಯ ಕೋವಿಡ್ ಪರೀಕ್ಷಾ ನಿಯಮವನ್ನು ಕೈಬಿಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.
ಅಧಿಸೂಚನೆಯ ಪ್ರಕಾರ, ಫೆಬ್ರವರಿ 13 ರಿಂದ ಚೀನಾ, ಸಿಂಗಾಪುರ್, ಹಾಂಗ್ ಕಾಂಗ್, ರಿಪಬ್ಲಿಕ್ ಆಫ್ ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್’ ದೇಶಗಳಿಂದ ಭಾರತಕ್ಕೆ ಆಗಮಿಸುವವರು ಕಡ್ಡಾಯ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
‘ಸಚಿವಾಲಯವು ತನ್ನ ‘ಅಂತರರಾಷ್ಟ್ರೀಯ ಆಗಮನಕ್ಕಾಗಿ ಮಾರ್ಗಸೂಚಿಗಳನ್ನು’ ನವೀಕರಿಸುತ್ತಿದೆ ಮತ್ತು ನಿರ್ಗಮನ ಪೂರ್ವ COVID-19 ಪರೀಕ್ಷೆಯ ಅವಶ್ಯಕತೆಗಳನ್ನು ಕೈಬಿಡುತ್ತಿದೆ ಮತ್ತು ನಾಗರಿಕ ವಿಮಾನಯಾನ ಸಚಿವಾಲಯದ ‘ಏರ್ ಸುವಿಧಾ’ ಪೋರ್ಟಲ್‌ನಲ್ಲಿ ಸ್ವಯಂ-ಆರೋಗ್ಯ ಘೋಷಣೆಯನ್ನು ಅಪ್‌ಲೋಡ್ ಮಾಡಲಾಗಿದೆ.
ಕೆಲ ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷಾ ನಿಯಮದಿಂದ ವಿನಾಯಿತಿ ನೀಡಲಾಗಿದೆ ಕೋವಿಡ್ ಪ್ರಕರಣಗಳ ಹೆಚ್ಚಳದಿಂದಾಗಿ ಚೀನಾ, ಸಿಂಗಾಪುರ, ಕೊರಿಯಾ, ಥೈಲ್ಯಾಂಡ್ ಮತ್ತು ಜಪಾನ್‌ನಿಂದ ಆಗಮಿಸುವ ಪ್ರಯಾಣಿಕರು ‘ಏರ್ ಸುವಿಧಾ’ ಪೋರ್ಟಲ್‌ನಲ್ಲಿ ಆರ್‌ಟಿ-ಪಿಸಿಆರ್ ವರದಿಯನ್ನು ಅಪ್‌ಲೋಡ್ ಮಾಡಲು ಸರ್ಕಾರ ಈ ಹಿಂದೆ ಕಡ್ಡಾಯಗೊಳಿಸಿತ್ತು. ಇದೀಗ ಹಿಂಪಡೆಯಲಾಗಿದೆ. ಹಾಗಾಗಿ ಇನ್ಮುಂದೆ ಈ ಐದು ದೇಶಗಳ ವಿದೇಶಿಗರು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…