ಬೆಂಗಳೂರು, : ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ, ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಇದೇ 26ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಕೆಲವು ದಿನಗಳಿಂದ ಶರತ್ ಅವರು ಕಾಂಗ್ರೆಸ್ ಸೇರ್ಪಡೆಯಾಗುವ ವಿಚಾರ ಚರ್ಚೆಗೆ ಗ್ರಾಸವಾಗಿತ್ತು. ಅವರು ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದು ಈಗ ಸೇರ್ಪಡೆ ದಿನ ನಿಗದಿಯಾಗಿದೆ. 26ರಂದು ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶರತ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ಸೇರಿದ ಬಳಿಕ, ಮಾಚ್೯ ಮೊದಲ ವಾರದಲ್ಲಿ ಹೊಸಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಸಿ ತಮ್ಮ ಶಕ್ತಿ ಪ್ರದರ್ಶನಸಲು ಶರತ್ ತೀರ್ಮಾನಿಸಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಶರತ್ ಬಚ್ಚೇಗೌಡ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ.ಟಿ.ಬಿ ನಾಗರಾಜ್ ವಿರುದ್ದ ಸೋಲನುಭವಿಸಿದ್ದರು. ಎಂ.ಟಿ.ಬಿ ನಾಗರಾಜ್ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದರು. ಬಳಿಕ ಶಾಸಕ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಹೊಸಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಟಿ.ಬಿ ನಾಗರಾಜ್, ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ವಿರುದ್ಧ ಸೋಲು ಕಂಡಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿ ಬಿಜೆಪಿಯಿಂದ ಆಯ್ಕೆಯಾದ ಎಂ.ಟಿ.ಬಿ ನಾಗರಾಜ್, ಇದೀಗ ಮತ್ತೆ ಸಚಿವರಾಗಿದ್ದಾರೆ.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…