Featured

ಫೆ.27ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ : ವಿಮಾನ ನಿಲ್ದಾಣ ಲೋಕಾರ್ಪಣೆ – Vishwanews24

ಫೆ.27ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ : ವಿಮಾನ ನಿಲ್ದಾಣ ಲೋಕಾರ್ಪಣೆ

ಶಿವಮೊಗ್ಗ : ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ 27ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಪ್ರಧಾನಿ ಅವರು ಜಿಲ್ಲೆಯ ರೈಲ್ವೇ ಯೋಜನೆಗಳಿಗೆ ಚಾಲನೆ ನೀಡಲಿದ್ದು, ಸಿರಿಧಾನ್ಯ ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಅವರ ಭೇಟಿ ಸಂದರ್ಭದಲ್ಲಿ ಸೂಕ್ತ ಟ್ರಾಫಿಕ್ ವ್ಯವಸ್ಥೆ, ಬೆಂಗಾವಲು ವಾಹನಗಳು, ಸುರಕ್ಷತಾ ಕ್ರಮಗಳು, ವೇದಿಕೆ, ಗ್ರೀನ್ ರೂಂ, ಅತಿಥಿ ಗಣ್ಯರಿಗೆ ವಾಸ್ತವ್ಯ ಮತ್ತು ಆತಿಥ್ಯ ವ್ಯವಸ್ಥೆ, ಇಂಟರ್ನೆಟ್ ಸಂಪರ್ಕ, ಸಿಸಿಟಿವಿ ಅಳವಡಿಕೆ, ನಿರಂತರ ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪ್ರತಿಯೊಂದು ಕಾರ್ಯದ ಮೇಲುಸ್ತುವಾರಿಗೆ ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗುವುದು ಎಂದರು.

ಸ್ಥಳೀಯವಾಗಿ ಅಂಬ್ಯುಲೆನ್ಸ್, ಅಗ್ನಿಶಾಮಕ ದಳದ ವಾಹನ ವ್ಯವಸ್ಥೆಯನ್ನು ಮಾಡಬೇಕು. ಪೊಲೀಸ್ ಬ್ಯಾಂಡ್ ವತಿಯಿಂದ ರಾಷ್ಟçಗೀತೆ ನುಡಿಸಲಾಗುವುದು. ಆಹಾರದ ಸುರಕ್ಷತೆ, ಬೆಂಕಿ ಸುರಕ್ಷತೆ ಮತ್ತು ವಿದ್ಯುತ್ ಸುರಕ್ಷತೆಯನ್ನು ಸಂಬAಧಪಟ್ಟ ಇಲಾಖಾಧಿಕಾರಿಗಳು ಪ್ರಮಾಣೀಕರಿಸಬೇಕು. ಅತಿಥಿಗಳಿಗೆ ಸೂಕ್ತ ವಾಸ್ತವ್ಯಕ್ಕಾಗಿ ಎಲ್ಲಾ ಸರ್ಕಾರಿ ಅತಿಥಿ ಗೃಹಗಳು ಮತ್ತು ನಗರದ ಲಾಡ್ಜ್ಗಳನ್ನು ಕಾಯ್ದಿರಿಸಬೇಕು. ಕಾರ್ಯಕ್ರಮದ ಆಮಂತ್ರಣ ಪತ್ರಿಕೆ, ವೇದಿಕೆ ಹಾಗೂ ಮುಂಭಾಗದಲ್ಲಿ ಆಸನ ವ್ಯವಸ್ಥೆ, ಪ್ರವೇಶ ದ್ವಾರ, ಶೌಚಾಲಯಗಳು ಸೇರಿದಂತೆ ಪ್ರತಿಯೊಂದು ಅಂಶಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕು. ಅಧಿಕಾರಿಗಳು ತಮಗೆ ನೀಡಲಾಗುವ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಡಿ.ಪ್ರಕಾಶ್, ಮುಖ್ಯಮಂತ್ರಿ ಅವರ ವಿಶೇಷಾಧಿಕಾರಿ ರಾಜಪ್ಪ, ಎಎಸ್ಪಿ ಅನಿಲ್ ಕುಮಾರ್ ಭೂಮರಡ್ಡಿ, ಪಿಡಬ್ಲುಡಿ ಚೀಫ್ ಇಂಜಿನಿಯರ್ ಕಾಂತರಾಜು, ಅಪರ ಜಿಲ್ಲಾಧಿಕಾರಿ ಎಸ್.ಎಸ್.ಬಿರಾದಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago