ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಉದ್ಘಾಟನೆ ಮಾಡಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಬೆಂಗಳೂರು ನಂತರ ಶಿವಮೊಗ್ಗ ವಿಮಾನ ನಿಲ್ದಾಣ ದೊಡ್ಡ ವಿಮಾನ ನಿಲ್ದಾಣ ಆಗಲಿದೆ. ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರಮೋದಿ ಅವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇಡೀ ದೇಶದಲ್ಲಿಯೇ ಅತಿ ಕಡಿಮೆ 449 ಕೋಟಿ ರೂಪಾಯಿ ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಬೆಂಗಳೂರು ಬಳಿಕ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣ ಎಂಬ ಖ್ಯಾತಿಗೆ ಶಿವಮೊಗ್ಗ ವಿಮಾನ ನಿಲ್ದಾಣ ಪಾತ್ರವಾಗಲಿದೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
Join our Whatsapp group by clicking the below link 👇👇
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…