ಫೆ. 28 ರಿಂದ ಮಾ.2 ರವರೆಗೆ ಕಾಪು ಶ್ರೀ ಹೊಸ ಮಾರಿಗುಡಿ ಶ್ರೀ ಮಾರಿಯಮ್ಮನ ಪ್ರಥಮ ಪ್ರತಿಷ್ಠಾ ವರ್ಧಂತಿ – vishwanews24

Featured, ಉಡುಪಿ

ಫೆ. 28 ರಿಂದ ಮಾ.2 ರವರೆಗೆ ಕಾಪು ಶ್ರೀಹೊಸ ಮಾರಿಗುಡಿ ಶ್ರೀಮಾರಿಯಮ್ಮನ ಪ್ರಥಮ ಪ್ರತಿಷ್ಠಾ ವರ್ಧಂತಿ 

ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಕಾಪು : ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಸಾನಿಧ್ಯದಲ್ಲಿ ಫೆ. 28 ರಿಂದ ಮಾ.2 ರವರೆಗೆ ಜರಗಲಿರುವ ಕಾಪುವಿನ ಅಮ್ಮನ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – ಮಾತೃ ವೈಭವಕ್ಕೆ ಪೂರ್ವಭಾವಿಯಾಗಿ ಫೆ. 26 ರಂದು ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆ ವೈಭವ ನಡೆಯಲಿದೆ.

ಮೂರು ದಿನಗಳ ಕಾಲ ನಡೆಯುವ ಮಾತೃವೈಭವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಪ್ರತೀ ದಿನ ಮಧ್ಯಾಹ್ನ ಮತ್ತು ರಾತ್ರಿ ನಿರಂತರ ಅನ್ನಸಂತರ್ಪಣೆ ನಡೆಯಲಿದೆ. ಅದಕ್ಕೆ ಪೂರಕವಾಗಿ ಭಕ್ತಾಧಿಗಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಹೊರೆಕಾಣಿಕೆ ಸಂಗ್ರಹಿಸಲು ತೀರ್ಮಾನಿಸಿದೆ.

ಇದನ್ನೂ ಓದಿ : 👇

ಫೆ.28ರಂದು ಎರ್ಮಾಳು ತೆಂಕ- ಬಡಾ ಜೋಡುಕರೆ ಕಂಬಳ – vishwanews24

ಸಮಿತಿಯು ಕಾಪು ಮಾರಿಯಮ್ಮನ ಭಕ್ತಾಧಿಗಳು, ಕಾಪುವಿನ ಅಮ್ಮನ ಮಕ್ಕಳು, ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳಿಂದ ಸಂಗ್ರಹಿಸುವ ಹೊರೆಕಾಣಿಕೆಯನ್ನು ಫೆ. 26ರಂದು ಸಂಜೆ ಗಂಟೆ 4 ಗಂಟೆಗೆ ಕಾಪು ಉಳಿಯಾರಗೋಳಿ ದಂಡತೀರ್ಥ ಮಠದ ಬಳಿಯಿಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣಾ ಶೋಭಾಯಾತ್ರೆಯ ಮೂಲಕವಾಗಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಸಮರ್ಪಿಸಲಾಗುವುದು ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ಮಾತೃವೈಭವ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್‌, ಹೊರೆಕಾಣಿಕೆ ಸಮರ್ಪಣಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : 👇

ಕೆಎಸ್‌ಆರ್ ಬೆಂಗಳೂರು- ಕಾರವಾರ ನಡುವಿನ ಪಂಚಗಂಗಾ ಎಕ್ಸ್‌ಪ್ರೆಸ್‌ಗೆ ತಾತ್ಕಾಲಿಕ ಹೆಚ್ಚುವರಿ ಬೋಗಿ – vishwanews24

Leave a Reply